ಜನ ಮನದ ನಾಡಿ ಮಿಡಿತ

Advertisement

ಕರ್ನಾಟಕದ ಹಲವು ಆರ್​ಟಿಓ ಚೆಕ್​​ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿ

ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಆರ್​ಟಿಓ ಚೆಕ್ ಪೋಸ್ಟ್​​ಗಳ ಮೇಲೆ ದಾಳಿ ಮಾಡಿದ್ದಾರೆ. ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ​​ ಜಿಲ್ಲೆಗಳಲ್ಲಿನ ಆರ್​ಟಿಓ ಚೆಕ್​​ ಪೋಸ್ಟ್​​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್​ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್​ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿದೆ.

ಆರ್​ಟಿಓ ಚೆಕ್ ಪೋಸ್ಟ್​​ ಸಿಬ್ಬಂದಿ ವಿರುದ್ಧ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ದೂರು ಕೇಳಿಬಂದ ಆರ್​ಟಿಓ ಚೆಕ್​ಪೋಸ್ಟ್​​ಗಳ ಮೇಲೆ ಅಧಿಕಾರಿಗಳು ಇಂದು (ಅ.08) ಬೆಳ್ಳಂ ಬೆಳಗ್ಗೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡೂ ಚೆಕ್ ಪೋಸ್ಟ್​​ಗಳಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಹಣ ಪತ್ತೆಯಾಗಿದೆ. ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ.

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿರುವ ಆರ್​ಟಿಓ ಚೆಕ್ ಪೋಸ್ಟ್​​ನಲ್ಲಿನ ಸಿಬ್ಬಂದಿ ವಿರುದ್ಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಬೀದರ್ ಹಾಗೂ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್, ಕಲಬುರಗಿ ಲೋಕಾಯುಕ್ತ ಡಿವೈಎಸ್​ಪಿ ಗೀತಾ ಬೀದರ್ ಮತ್ತು ಡಿವೈಎಸ್​ಪಿ ಹಣುಮಂತರಾಯ ನೇತೃತ್ವದ 4 ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ್ ಬಳಿ ಇರುವ ಆರ್​ಟಿಓ ಚೆಕ್ ​ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲೇಶ ನೇತೃತ್ವದ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಹಾಗೇ, ಬಳ್ಳಾರಿ ತಾಲೂಕಿನ ಪಿಡಿ‌ ಹಳ್ಳಿ ಸಮೀಪದ ಆರ್​ಟಿಓ ಚೆಕ್‌ ಪೋಸ್ಟ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ದಾಳಿ ಮಾಡಿದೆ. ಅಧಿಕಾರಿಗಳು ಚೆಕ್ ಪೋಸ್ಟ್​​ನಲ್ಲಿದ್ದ ಹಣವನ್ನು ವಶಪಡಿಸಿಕೊಂಡಿದ್ದು, ಶೋಧ ಕಾರ್ಯ ಮುಂದುವರೆದಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!