ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಅನರ್ಹ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆಪಾದಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕಾರ್ಕಳ ವಿಧಾನ ಸಭಾ ಕ್ಷೇತ್ರ ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಹಲವು ಪ್ರಮುಖರು ಬಾಯಿಗೆ ಬಟ್ಟೆ ಕಟ್ಟಿ ಪ್ರತಿಭಟಿಸಿದರು.
ಬ್ಲಾಕ್ ಕಾಂಗ್ರೆಸ್ ಕಾರ್ಕಳ – ಬ್ಲಾಕ್ ಕಾಂಗ್ರೆಸ್ ಹೆಬ್ರಿಯ ಪ್ರಮುಖರು ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಮೌನ ಧರಣಿ ಸತ್ಯಾಗ್ರಹವನ್ನು ನಿನ್ನೆ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಬೆಳಗ್ಗೆ 10 ಗಂಟೆ ಸಾಯಂಕಾಲ 5 ಗಂಟೆಯ ವರೆಗೆ ನಡೆಸಿದರು. ವಿವಿಧ ಘೋಷಣೆಗಳುಳ್ಳ ಭಿತ್ತಿಚಿತ್ರಗಳನ್ನು ಪ್ರತಿಭಟನಕಾರರು ಪ್ರದರ್ಶಿಸಿದರು. ರಾಹುಲ್ ಗಾಂಧಿಯವರ ಸತ್ಯದ ನುಡಿಗಳನ್ನು ಸಹಿಸದ ಪ್ರಧಾನಿಯವರು ಅವರ ವಿರುದ್ಧ ಸೇಡಿನ ಕ್ರಮ ಅನುಸರಿಸುತ್ತಿದ್ದಾರೆ. ರಾಹುಲ್ ಗಾಂಧಿಯವರ ರಾಜಕೀಯ ಜೀವನ ಕೊನೆಗೊಳಿಸಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಈ ಪ್ರತಿಭಟನೆ ನಡೆದಿದೆ.
ಜಿಲ್ಲಾ ಕಾಂಗ್ರೆಸ್ ವಕ್ತರ ಬಿಪಿನ್ ಚಂದ್ರ ಪಾಲ್ ನಕ್ರೆ, D.R. ರಾಜು ರಾಜ್ಯ ಹಿಂದುಳಿದ ವರ್ಗ ದ ಉಪಾಧ್ಯಕ್ಷರು, ಶೇಖರ್ ಮಡಿವಾಳ ಜಿಲ್ಲಾ ಕಾಂಗ್ರೆಸ್ ಮುಖಂಡರು, ಶುಭದ ರಾವ್ ಕಾಂಗ್ರೆಸ್ ವಕ್ತರರು ಹಾಗೂ ಹಲವು ಪ್ರಮುಖರು ಬೆಂಬಲ ಸೂಚಿಸಿದರು.



