ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣ ಮತ್ತೆ ತನ್ನ ಆರ್ಭಟ ತೋರಿಸುತ್ತಿದ್ದಾನೆ.ಇಡೀ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಮಳೆಯ ಅಬ್ಬರಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ. ಭಾನುವಾರದಿಂದ ಈವರೆಗೆ ಇಡೀ ಜಿಲ್ಲೆಯಾದ್ಯಂತ ಜೋರಾದ ಗಾಳಿ ಮಿಂಚು-ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮಂಗಳೂರು ನಗರ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಮಳೆ ಅಬ್ಬರಿಸಿ ಬೊಬ್ಬೆರೆದಿದೆ.
ಅಕ್ಟೋಬರ್ 15 ರ ತನಕ ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಕ್ಟೋಬರ್ 10ರಿಂದ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳನ್ನೂ ಊಹಿಸಲಾಗಿದೆ.



