ಗುರುವಾಯನಕೆರೆ ಶಕ್ತಿನಗರ ಬಳಿ ರಸ್ತೆ ವಿಭಜಕಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (30) ಎಂದು ಗುರುತಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೇಂಟರ್ ಆಗಿದ್ದ ಸುಧೀಶ್ ಗುರುವಾರ ಉಪ್ಪಿನಂಗಡಿಯಿಂದ ಮನೆಗೆ ಮರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಡಿವೈಡರ್‌ನಲ್ಲಿದ್ದ ಎರಡು ದೀಪಗಳಿಗೂ ಹಾನಿಯಾಗಿದೆ. ಸುಧೀಶನ ತಲೆಗೆ ತೀವ್ರ ಪೆಟ್ಟಾಗಿದ್ದು, ತಕ್ಷಣ ಸಾವನ್ನಪ್ಪಿದ್ದಾನೆ.
ಅವರು ತಂದೆ, ಇಬ್ಬರು ಸಹೋದರಿಯರು ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ.




