ಗುರುವಾಯನಕೆರೆ ಶಕ್ತಿನಗರ ಬಳಿ ರಸ್ತೆ ವಿಭಜಕಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (30) ಎಂದು ಗುರುತಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೇಂಟರ್ ಆಗಿದ್ದ ಸುಧೀಶ್ ಗುರುವಾರ ಉಪ್ಪಿನಂಗಡಿಯಿಂದ ಮನೆಗೆ ಮರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಡಿವೈಡರ್ನಲ್ಲಿದ್ದ ಎರಡು ದೀಪಗಳಿಗೂ ಹಾನಿಯಾಗಿದೆ. ಸುಧೀಶನ ತಲೆಗೆ ತೀವ್ರ ಪೆಟ್ಟಾಗಿದ್ದು, ತಕ್ಷಣ ಸಾವನ್ನಪ್ಪಿದ್ದಾನೆ.
ಅವರು ತಂದೆ, ಇಬ್ಬರು ಸಹೋದರಿಯರು ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ.
ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್)ನಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ₹5 ಲಕ್ಷದ ಆರೋಗ್ಯ…
ಕರಾವಳಿ ಮತ್ತು ಮಲೆನಾಡು ಭಾಗದ ಜನರಿಗೆ ಸುಲಭವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ನ್ಯಾಯ ದೊರೆಯುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ…
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದ ಬಂಧನದ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ಬಗ್ಗೆ ತನಗೆ ಯಾವುದೇ…
ಭಾರತೀಯ ನೌಕಾಪಡೆಯ ಕಾರ್ಯಾಚರಣಾ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ ನಿರ್ಮಿಸಲಾಗಿರುವ ಬಹುಪಯೋಗಿ ನೌಕೆ ‘ಐಎನ್ಎಸ್ ಸಮರ್ಥಕ್’ ಕಾರವಾರ ನೌಕಾನೆಲೆಯಲ್ಲಿ ಲೋಕಾರ್ಪಣೆಗೊಂಡಿದೆ. ಕೇಂದ್ರ…
ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಾಮ್ಶೀದ್ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.…
ಕೃಷಿ ಅಭಿವೃದ್ಧಿ, ಆಧುನಿಕ ತಂತ್ರಜ್ಞಾನಗಳ ಪರಿಚಯ ಹಾಗೂ ರೈತರು ಮತ್ತು ವಿಜ್ಞಾನಿಗಳ ನಡುವೆ ನೇರ ಸಂವಾದಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ…