ಜನ ಮನದ ನಾಡಿ ಮಿಡಿತ

Advertisement

ಉದ್ಯೋಗದಾತ ವಿದ್ಯಾಮಾತಾದಲ್ಲಿ 7ನೇ ವರ್ಷದ ಶಾರದೋತ್ಸವ 

ಉದ್ಯೋಗದಾತ ವಿದ್ಯಾಮಾತಾದಲ್ಲಿ 7ನೇ ವರ್ಷದ ಶಾರದೋತ್ಸವ 

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ನೀಡುವುದರ ಮೂಲಕ ಯುವ ಜನತೆಯ ಬಾಳಿನ ಬೆಳಕಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ 7ನೇ ವರ್ಷದ ಶಾರದೋತ್ಸವ ವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

 

 

ಶಾರದಾ ಪೂಜೆ ನೆರವೇರಿಸಿದ ವಿದ್ಯಾರ್ಥಿಗಳು
ಮುಂಜಾನೆ ಸ್ವಸ್ತಿ ಪುಣ್ಯಾಹವಾಚನ ಮತ್ತು ಗಣಪತಿ ಹೋಮದ ಮೂಲಕ ಮೊದಲ್ಗೊಂಡು ನಂತರದಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ಸಿದ್ದತಾ ತರಬೇತಿಯಲ್ಲಿರುವ ಸಂಸ್ಥೆಯ ವಿದ್ಯಾರ್ಥಿಗಳು ಭಜನೆ ಹಾಗೂ ಶಾರದಾ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಿದರು.
ಮಧ್ಯಾಹ್ನ ವಿದ್ಯಾಮಾತಾ ಅಕಾಡೆಮಿಯ ಆಡಳಿತ ಮಂಡಳಿ, ತರಬೇತುದಾರರು ಹಾಗೂ ವಿದ್ಯಾರ್ಥಿಗಳು ಹಾಗೂ ಆಗಮಿಸಿದ್ದ ಅತಿಥಿಗಳ ಸಮ್ಮುಖದಲ್ಲಿ ಸಹಭೋಜನ ನಡೆಯಿತು ಹಾಗೂ ರಾತ್ರಿ ದುರ್ಗಾ ನಮಸ್ಕಾರ ಪೂಜೆ ನೆರವೇರಿತು.
ಪೂಜಾ ಕಾರ್ಯಗಳಿಗೆ ಆಗಮಿಸಿದ ಎಲ್ಲರನ್ನು ಸಂಸ್ಥೆಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಹಾಗೂ ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈರವರು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ, ಜೆಸಿಐ ಪುತ್ತೂರು ಇದರ ಅಧ್ಯಕ್ಷ ಮೋಹನ್ ಕೆ, ಜೆಸಿಐ ಪುತ್ತೂರು ಕಾರ್ಯದರ್ಶಿ ಆಶಾ ಮೋಹನ್, ಮುಖಂಡರಾದ ಹೇಮನಾಥ ಶೆಟ್ಟಿ ಕಾವು, ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಕೃಷ್ಣ ಪ್ರಸಾದ್ ಆಳ್ವಾ, ಸುದನಾ ಪದವಿ ಪೂರ್ವ ಕಾಲೇಜ್ ನ ಪ್ರಾಂಶುಪಾಲರಾದ ಸುಪ್ರೀತ್ ಕೆ ಸಿ, ಲಯನ್ಸ್ ಕ್ಲಬ್ ನ ಪದಾಧಿಕಾರಿಗಳಾದ ರವಿ ಪ್ರಸಾದ್, ಗಣೇಶ್ ನೆಲ್ಲಿಕಟ್ಟೆ, ವಿದ್ಯಾಮಾತಾ ಫೌಂಡೇಶನ್ ನ ಕಾರ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅಳಕೆಮಜಲು, ವಿದ್ಯಾಮಾತಾ ಅಕಾಡೆಮಿ ಸುಳ್ಯ ಶಾಖೆಯ ಸಾರ್ವಜನಿಕ ಸಂಪರ್ಕಧಿಕಾರಿ ಚಂದ್ರಾವತಿ ಬಡ್ಡಡ್ಕ, ಶಿವ ಶ್ರೀ ರಂಜನ್ ದೇರ್ಲ ಹಾಗೂ ವಿದ್ಯಾಮಾತಾ ಅಕಾಡೆಮಿಯ ತರಬೇತುದಾರರು, ಸಿಬ್ಬಂದಿ ವರ್ಗ ಹಾಗೂ ಪ್ರಸ್ತುತ ವಿವಿಧ ನೇಮಕಾತಿ ಪರೀಕ್ಷೆಗಳಿಗೆ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಹಾಗೂ ವಿದ್ಯಾಮಾತಾ ಅಕಾಡೆಮಿಯ ಹಿತೈಷಿಗಳು ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.

 

 

 

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!