ತೀರ್ಥಹಳ್ಳಿ: ವ್ಯವಹಾರದಲ್ಲಿ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಮನನೊಂದ ಉಡುಪಿ ಮೂಲದ ಉದ್ಯಮಿಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯ ಲಾಡ್ಜ್ ವೊಂದರಲ್ಲಿ ನಡೆದಿದೆ.
ಉಡುಪಿಯ ಹಿರಿಯಡ್ಕದ ಕೊಂಡಾಡಿ ಮೂಲದ ಪ್ರಸನ್ನ ಶೆಟ್ಟಿ (45) ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಅವರು 3 ದಿನಗಳ ಹಿಂದೆ ತೀರ್ಥಹಳ್ಳಿಯ ವಸತಿಗೃಹವೊಂದರಲ್ಲಿ ವಾಸ್ತವ್ಯ ಹೂಡಿದ್ದರು. ಕೊಠಡಿಯಿಂದ ಯಾವುದೇ ಶಬ್ದ ಕೇಳಿಸದಿದ್ದರಿಂದ ಅನುಮಾನಗೊಂಡ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.
ಸುಮಾರು ಆರು ಪುಟಗಳ ಡೆತ್ ನೋಟ್ ಬರೆದಿಟ್ಟು ಸಾವಿನ ಕಾರಣ ವಿವರಿಸಿದ್ದಾರೆ. ಕೆಲವೊಂದು ಹೆಸರುಗಳನ್ನು ಬರೆದಿದ್ದು ಮತ್ತೆ ಕೆಲವು ತನ್ನ ವ್ಯವಹಾರದ ವಿಷಯಗಳನ್ನು ಬರೆದಿಟ್ಟಿದ್ದರು ಎಂದು ಪೊಲೀಸ್ ಮೂಲದಿಂದ ತಿಳಿದುಬಂದಿದೆ. ಪ್ರಸನ್ನ ಶೆಟ್ಟಿ, ಬೆಂಗಳೂರಿನಲ್ಲಿ ರೆಸ್ಟೋರೆಂಟ್, ಬೇಕರಿ ಮತ್ತು ಹಣದ ವ್ಯವಹಾರವನ್ನು ನಡೆಸುತ್ತಿದ್ದರು
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…