ಉಡುಪಿ: ನಾಪತ್ತೆಯಾಗಿದ್ದ ಮಲ್ಪೆ ಬಾಪು ತೋಟದ ನಿವಾಸಿ ಜಲೀಲ್ (49) ಎಂಬವರ ಮೃತದೇಹವು ಪಡುಕೆರೆ ಮಟ್ಟು ಸಮೀಪದ ಪಾಪನಾಶಿನಿ ನದಿಯಲ್ಲಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.
ಜಲೀಲ್ ಅ.12ರ ಶನಿವಾರ ಬೆಳಿಗ್ಗೆ 5 ಗಂಟೆಗೆ ಮನೆಯಿಂದ ನಾಪತ್ತೆಯಾಗಿದ್ದರು. ಅವರ ಬೈಕ್, ಮೊಬೈಲ್ ಹಾಗೂ ಚಪ್ಪಲಿ ಮಲ್ಪೆ ಪಡುಕರೆ ಸೇತುವೆ ಬಳಿ ಪತ್ತೆಯಾಗಿತ್ತು. ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡವು ಜಲೀಲ್ ನಾಪತ್ತೆಯಾಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶವನ್ನು ಬಿತ್ತರಿಸಿತ್ತು. ಬೆಳಿಗ್ಗೆ ಸುಮಾರು 7 ಗಂಟೆಗೆ ಪಡುಕರೆ ಬಾಪುತೋಟ ಸಮೀಪದ ಪಾಪನಾಶಿನಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಸ್ಥಳೀಯ ಮೀನುಗಾರರು ಮೃತದೇಹದ ಹುಡುಕಾಟಕ್ಕೆ ಈಶ್ವರ್ ಮಲ್ಪೆ ಮತ್ತು ತಂಡದ ಜೊತೆಗೆ ಸಹಕಾರ ನೀಡಿದ್ದರು. ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ತಮ್ಮ ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…