ಜನ ಮನದ ನಾಡಿ ಮಿಡಿತ

Advertisement

ಬಾಂಬಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು; ಆಳೆತ್ತರದ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಸಾವು…!

ಬಿಸಿರೋಡು- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ ಮೃತಪಟ್ಟ ಮಹಿಳೆಯಾಗಿದ್ದಾರೆ. ಚಾಲಕ ರೂಪೇಶ್ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೂಪೇಶ್ ಅವರ ಪತ್ನಿ ಸುಚಿತ್ರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

 

 

 

ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗೆನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಮೂಲತಃ ಮಂಗಳೂರು ಕೊಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲೂಡಿ ಇಂಜಿನಿಯರ್ ಗೋಪಾಲ ಸಹೋದರಿ ಭಾಗೀರಥಿ ಅವರು ಅವರು ಮೃತಪಟ್ಟಿದ್ದಾರೆ. ಭಾಗೀರಥಿ ಅವರ ಮಗಳು ಸುಚಿತ್ರ ಅವರ ಪತಿ ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ದಸರಾ ರಜೆಯಲ್ಲಿ ಅಳಿಯ ಮಗಳ ಜೊತೆ ತುಮಕೂರಿಗೆ ಹೋಗಿ ವಾಪಾಸು ಮಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಾಂಬಿಲ ತಿರುವಿನಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದು, ಜೀವಹಾನಿಗಳು ನಡೆದಿವೆ. ಇತ್ತೀಚೆಗೆ ಇದೊಂದು ಅಪಘಾತ ಸ್ಪಾಟ್ ಆಗಿ ಪರಿವರ್ತನೆ ಆಗುತ್ತಿದೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

 

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!