ಸಂಡೂರು ವಿಧಾನಸಭಾ ಕ್ಷೇತ್ರದ ನೂರಾರು ಕೋಟಿ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿಗೆ ನಾರಿಹಳ್ಳ ಕಿರು ಜಲಾಶಯಕ್ಕೆ ಬಾಗಿನ ಅರ್ಪಿಸಿದರು.ದೇವರಾಜ ಅರಸು ಅವರ ನಂತರ ನಾರಿಹಳ್ಳ ಜಲಾಶಯಕ್ಕೆ ಆಗಮಿಸಿದ ಎರಡನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎನ್ನುವ ಸಂತಸವನ್ನು ಬಾಗಿನ ಅರ್ಪಣೆ ಪೂಜಾ ಕಾರ್ಯದಲ್ಲಿದ್ದ ಪುರೋಹಿತರು ಹಂಚಿಕೊಂಡರು.ಸಂಡೂರು ತಾಲೂಕಿನ ನಾರಿಹಳ್ಳ ಕಿರು ಡ್ಯಾಂ 0.810 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು 615 ಕಿ.ಮೀ. ವಿಸ್ತೀರ್ಣ ಇದೆ. ಈ ಜಲಾಶಯ ಸಂಡೂರಿನ 20 ಗ್ರಾಮಗಳಿಗೆ ಕುಡಿಯುವ ನೀರಿಗೆ ಆಧಾರ ಆಗಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್ ಖಾನ್, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್, ಶಾಸಕರಾದ ಶ್ರೀನಿವಾಸ್, ಕಂಪ್ಲಿ ಗಣೇಶ್, ಲತಾ ಮಲ್ಲಿಕಾರ್ಜುನ್, ಸಂಸದ ಈ.ತುಕಾರಾಂ ಸೇರಿ ಹಲವರು ಉಪಸ್ಥಿತರಿದ್ದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…