ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅ.18ರಂದು ತಮಿಳುನಾಡು ಕರಾವಳಿಯಲ್ಲಿ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದೇ ಸಮಯದಲ್ಲಿ ಅರಬ್ಬಿ ಸಮುದ್ರದ ಉತ್ತರ ಕೇರಳ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಅ.20 ರ ನಂತರ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬೆಳಿಗ್ಗೆಯಿಂದಲೇ ತುಂತುರು ಮಳೆ ಹಾಗೂ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಮಳೆ ಸ್ವಲ್ಪ ಜಾಸ್ತಿಯಾಗುವ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಗೆ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಅಕ್ಟೊಬರ್ 16ರಂದು ಉತ್ತಮ ಮಳೆಯ ಸಾಧ್ಯತೆ ಇದ್ದು, ನಂತರ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಅಕ್ಟೊಬರ್ 20ರಿಂದ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಬಹುತೇಕ ಭಾಗಗಳಲ್ಲಿ ಬೆಳಿಗ್ಗೆಯಿಂದ ತುಂತುರು ಮಳೆ ಇದ್ದರೆ ಮಧ್ಯಾಹ್ನ ನಂತರ, ಸಂಜೆಯಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 16ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯ ಲಕ್ಷಣಗಳಿದ್ಧರೆ, ಚಿಕ್ಕಮಗಳೂರು, ಹಾಸನ, ಕೊಡಗು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 17 ರಿಂದ ಕಡಿಮೆಯಾಗುವ ಮಳೆಯು ಅಕ್ಟೊಬರ್ 20 ರಿಂದ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ನಿರಂತರ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಅಕ್ಟೊಬರ್ 16ರಂದು ಮೈಸೂರು, ಚಾಮರಾಜನಗರ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 17ರಿಂದ ಕಡಿಮೆಯಾದರೂ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅಕ್ಟೊಬರ್ 18ರಂದು ತಮಿಳುನಾಡು ಕರಾವಳಿಯಲ್ಲಿ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದೇ ಸಮಯದಲ್ಲಿ ಅರಬ್ಬಿ ಸಮುದ್ರದ ಉತ್ತರ ಕೇರಳ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಅಕ್ಟೊಬರ್ 20 ರ ನಂತರ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…