ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೊಂದು ವಿವಾದಕ್ಕೆ ಗುರಿಯಾಗಿದೆ. ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಹೊಡೆದಾಡಿಕೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಜಗದೀಶ್, ಉಗ್ರಂ ಮಂಜು ಹಾಗೂ ರಂಜಿತ್ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ ಎನ್ನಲಾಗಿದೆ.
ಬಿಗ್‌ಬಾಸ್ ಸೀಸನ್ 11ರ ಮನೆಯಲ್ಲಿ ಜಗದೀಶ್ ಹಾಗೂ ರಂಜಿತ್ ಕೈ ಕೈ ಮಿಲಾಯಿಸಿದ್ದು, ಇಬ್ಬರನ್ನು ಎವಿಕ್ಷನ್ ಮಾಡಿದ್ದಾರೆ. ಬಿಗ್‌ಬಾಸ್ ಮನೆಯಲ್ಲಿ ನಿನ್ನೆಯಿಂದಲೂ ಸ್ಪರ್ಧಿಗಳ ಮಧ್ಯೆ ಅತಿರೇಕದ ಜಗಳ ನಡೆಯುತ್ತಿತ್ತು.
ಕಳೆದ ಸೋಮವಾರ ಚೈತ್ರಾ ಕುಂದಾಪುರ ಜೊತೆ ಜಗದೀಶ್ ಅವರು ಜಗಳ ಮಾಡಿದ್ದರು. ಸಿಟ್ಟಿಗೆದ್ದ ಚೈತ್ರಾ ಅವರು ಅಪ್ಪನಿಗೆ ಹುಟ್ಟಿದ್ರೆ ಎದುರುಗಡೆ ನಿಂತು ಮಾತನಾಡು ಎಂದು ಸವಾಲು ಹಾಕಿದ್ದರು. ಚೈತ್ರಾ, ಜಗದೀಶ್ ಕೆಂಗಣ್ಣಿನಿಂದ ಗುರಾಯಿಸಿದ್ದು, ಮನೆಯ ವಾತಾವರಣ ರಣರಂಗವಾಗುವಂತೆ ಮಾಡಿತ್ತು.
ನಿನ್ನೆ ರಾತ್ರಿ ರಂಜಿತ್ ಮತ್ತು ಜಗದೀಶ್ ಹಾಗೂ ಉಗ್ರಂ ಮಂಜು ಮತ್ತು ಜಗದೀಶ್ ಮಧ್ಯೆ ಜೋರು ಗಲಾಟೆಯಾಗಿದೆ. ಬಿಗ್‌ಬಾಸ್ ಶೋ ಬಗ್ಗೆ ಜಗದೀಶ್ ಅವರು ಅವಾಚ್ಯವಾಗಿ ಮಾತನಾಡುತ್ತಿದ್ದು ಈ ಬಗ್ಗೆ ಎಲ್ಲಾ ಸ್ಪರ್ಧಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಾಗ್ವಾದದ ಮಧ್ಯೆ ಮಾನಸ ವಿಚಾರವಾಗಿ ರಂಜಿತ್ ಮತ್ತು ಜಗದೀಶ್ ಮಧ್ಯೆ ಜಗಳವಾಗಿದ್ದು ಅತಿರೇಕದ ಹಂತಕ್ಕೆ ಹೋಗಿದೆ.
ಇದಾದ ಮೇಲೆ ರಂಜಿತ್ ಮತ್ತು ಜಗದೀಶ್ ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದು ಬಿಗ್ ಬಾಸ್ ಮನೆಯಿಂದ ಎವಿಕ್ಷನ್ ಮಾಡಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ಈ ರೀತಿ ಸ್ಪರ್ಧಿಗಳು ಔಟ್ ಆಗಿರೋದು ಇದೇ ಮೊದಲಲ್ಲ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಈ ಹಿಂದೆ ಹುಚ್ಚ ವೆಂಕಟ್‌ನ ಶೋನಿಂದ ಎವಿಕ್ಷನ್ ಮಾಡಲಾಗಿತ್ತು. ಎರಡನೇ ಬಾರಿಗೆ ಕಿರಿಕ್ ಪಾರ್ಟಿ ಸಿನಿಮಾದ ನಟಿ ಸಂಯುಕ್ತ ಹೆಗೆಡೆ ಅವರು ಎವಿಕ್ಷನ್ ಆಗಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…