ಬೆಂಗಳೂರು: ”ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರು ಇತರರಿಗೆ ಆದರ್ಶರಾಗಿದ್ದಾರೆ. ಆದೇ ರೀತಿ ಶಿಕ್ಷಣ ಸಂಸ್ಥೆಗೆಂದು ಸಿಎ ನಿವೇಶನ ಪಡೆದು ಹೋಟೆಲ್ ತೆರೆದು ಬಿರಿಯಾನಿ ಮಾರುತ್ತಿರುವ ಛಲವಾದಿ ನಾರಾಯಣಸ್ವಾಮಿ ಅವರು ನಿವೇಶನ ಹಿಂದಿರುಗಿಸಿ ಆದರ್ಶ ಮೆರೆಯಲಿ“ ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ”5 ದಶಕಗಳಿಗೂ ಅಧಿಕ ಕಾಲ ಪರಿಶುದ್ಧ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಕೇಳಿಬರುತ್ತಿದ್ದಂತೆ ರಾಹುಲ್ ಖರ್ಗೆ ಅವರು, ನ್ಯಾಯಬದ್ಧವಾಗಿ ಲಭ್ಯವಾಗಿರುವ ಜಮೀನನ್ನು ಹಿಂದಿರುಗಿಸಿದ್ದಾರೆ. ಹೀಗಾಗಿ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡಬಾರದು. ಅಲ್ಲದೆ ಉದ್ದೇಶಪೂರ್ವಕವಾಗಿ ವಿವಾದಕ್ಕೆ ಸಿಲುಕಿಸುವ ಪ್ರಯತ್ನವನ್ನು ಮಾಡುತ್ತಿರುವ ಪ್ರತಿಪಕ್ಷಗಳು ಇನ್ನು ಮುಂದಾದರೂ ಇಂಥ ಕೃತ್ಯದಿಂದ ಹಿಂದೆ ಸರಿಯಬೇಕು“ ಎಂದಿದ್ದಾರೆ.
”ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಶಿಕ್ಷಣ ಸಂಸ್ಥೆ ಸ್ಥಾಪಿಸುವುದಾಗಿ ಕರ್ನಾಟಕ ಹೌಸಿಂಗ್ ಬೋರ್ಡ್ ನಿಂದ ಸಿಎ ನಿವೇಶನ ಪಡೆದು ಈಗ ಆ ಜಾಗದಲ್ಲಿ ಬಿರಿಯಾನಿ ಹೋಟೆಲ್ ನಡೆಸುತ್ತಿದ್ದಾರೆ. ಈಗ ನಾರಾಯಣಸ್ವಾಮಿ ಅವರೂ ಶಿಕ್ಷಣ ಸಂಸ್ಥೆ ಸ್ಥಾಪನೆಗೆಂದು ಮಂಜೂರಾದ ಜಮೀನನನ್ನು ವಾಪಸ್ ಮಾಡಿ ರಾಹುಲ್ ಖರ್ಗೆ ಅವರಂತೆ ಆದರ್ಶರಾಗುತ್ತಾರಾ? ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ದೇವನಹಳ್ಳಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ 116 ಎಕರೆ ಭೂಮಿಯನ್ನು ಕೇವಲ 50 ಕೋಟಿ ರೂ.ಗೆ ಹಂಚಿಕೆ ಮಾಡಲಾಗಿತ್ತು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 137 ಕೋಟಿ ರೂ. ನಷ್ಟವಾಗಿದೆ. ಈಗ ಆ ಜಮೀನನ್ನು ಆರ್ ಎಸ್ ಎಸ್ ನವರು ವಾಪಸ್ ಮಾಡುವ ಮೂಲಕ ಆದರ್ಶ ತೋರಿಸಲಿ“ ಎಂದು ಹೇಳಿದ್ದಾರೆ.
”ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಳ್ಳಾರಿಯ ಕುವೆಂಪು ನಗರದ ಬಡಾವಣೆಯಲ್ಲಿ ನಾಗರಿಕ ಸೌಲಭ್ಯಕ್ಕೆ (ಸಿಎ) ಮೀಸಲಿಟ್ಟಿರುವ ಕೋಟ್ಯಾಂತರ ರೂ. ಬೆಲೆಬಾಳುವ ನಿವೇಶನವನ್ನು ರಾಷ್ಟ್ರೋತ್ಥಾನ ಪರಿಷತ್ ಗೆ ಶೇ.25ರ ದರದಲ್ಲಿ 30 ವರ್ಷಗಳಿಗೆ ಗುತ್ತಿಗೆ ನೀಡಲಾಗಿತ್ತು. ಇದರಿಂದ ಸರ್ಕಾರಕ್ಕೆ 7.50 ಕೋಟಿ ರೂ. ನಷ್ಟವಾಗಿದೆ. ಈಗ ರಾಷ್ಟ್ರೋತ್ಥಾನ ಪರಿಷತ್ ನವರು ಸಹ ಭೂಮಿಯನ್ನು ಹಿಂದಿರುಗಿಸುವರೇ?
ಬಿಜೆಪಿ ಮತ್ತು ಸಂಘ ಪರಿವಾರದವರು ರಾಜ್ಯದ ವಿವಿಧೆಡೆಯಲ್ಲಿನ ಗೋಮಾಳ ಜಾಗವನ್ನು ಮಾರುಕಟ್ಟೆ ದರಕ್ಕಿಂತ ಚಿಲ್ಲರೆ ದರಕ್ಕೆ ಮಂಜೂರು ಮಾಡಿಸಿಕೊಂಡಿದ್ದಾರೆ. ಈಗ ಆ ಎಲ್ಲಾ ಜಾಗವನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಬಿಜೆಪಿ ನಾಯಕರು ಮತ್ತು ಆರ್ ಎಸ್ ಎಸ್ ನವರು ತಮ್ಮ ಆದರ್ಶವನ್ನು ತೋರಿಸುತ್ತಾರಾ?“ ಎಂದು ಮಂಜುನಾಥ ಭಂಡಾರಿ ಪ್ರಶ್ನಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…