ಕರಾವಳಿ

ತಳ ಸಮುದಾಯದವರು ಸಂಸ್ಕೃತ ಕಲಿತು ಕಾವ್ಯ ರಚಿಸಿದರೆ ಅಂಥವರ ಬಗ್ಗೆ ಕಥೆ ಕಟ್ಟುತ್ತಾರೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ಎಲ್ಲಾ ಎಸ್ ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.


ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಮಾತನಾಡಿದರು.

ಶಾಕುಂತಲಾ ನಾಟಕ
ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು. ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿ ರಾಮಾಯಣ ಬರೆಯಲು ಸಾಧ್ಯವಾ ಎಂದು ಕತೆ ಕಟ್ಟಿಬಿಟ್ಟರು. ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ದ ರಾಮಾಯಣ ಮಹಾಕಾವ್ಯ ಬರೆದರಲ್ಲಾ ಇದು ಹೆಮ್ಮೆಯ ಮತ್ತು ಮಾದರಿ ಸಂಗತಿ ಎಂದರು.

ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ಇವರೆಲ್ಲಾ ಕಲಿತರು. ಬರೆದರು. ಜಗತ್ತಿಗೇ ಪ್ರೇರಣೆ ಆದರು. ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ ಎಂದರು.

ರಾಮನ‌ ಮಕ್ಕಳಾದ ಲವ ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿಗಳು. ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದು ಸಣ್ಣ ಉದಾಹರಣೆ ಎಂದರು.

SCSP/TSP ಮೂಲಕ SC/ST ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಆಯವ್ಯಯದಲ್ಲಿ ಮೊದಲಿಗೆ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ತಳ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಮೊದಲು ಆರಂಭಿಸಿದ್ದು ನಾನು. ಪ್ರತೀ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡ್ತೀನಿ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವಾಗಲೀ, ಬಿಜೆಪಿ ಅಧಿಕಾರದಲ್ಲಿರುವ ಒಂದೇ ಒಂದು ರಾಜ್ಯದಲ್ಲಾಗಲೀ SCSP/ TSP ಕಾಯ್ದೆಯನ್ನು ಜಾರಿಗೆ ತಂದಿಲ್ಲ ಏಕೆ ಎಂದು ಸಿಎಂ ಪ್ರಶ್ನಿಸಿದರು.

ಬರೀ ಬಾಯಿ ಮಾತಲ್ಲಿ ಸಮಾನತೆ ಬರಲ್ಲ. ಆರ್ಥಿಕ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು ಎಂದು ಬಿಜೆಪಿ ಬಂಡವಾಳವನ್ನು ಬಿಚ್ಚಿಟ್ಟರು.

ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಹೋಗದ ಹೊರತು ಸಮಾನತೆ ಬರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ.

ನಮ್ಮ ಸರ್ಕಾರ ಎಲ್ಲಾ ಧರ್ಮ, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ ಶಕ್ತಿ ಕೊಡಲು ಗ್ಯಾರಂಟಿಗಳನ್ನು ಜಾರಿಗೆ ತಂದರೆ ಇದನ್ನು ವಿರೋಧಿಸಿದವರು ಬಿಜೆಪಿಯವರು. ಆದ್ದರಿಂದ ಗ್ಯಾರಂಟಿಗಳ ಫಲಾನುಭವಿಗಳು ಬಿಜೆಪಿಯವರಿಗೆ ಸರಿಯಾಗಿ ಪಾಠ ಹೇಳಿ. ಬಿಜೆಪಿಯವರ ಸುಳ್ಳುಗಳಿಗೆ ತಲೆ ಕೊಟ್ಟು ಮೋಸ ಹೋಗದೆ ಬಿಜೆಪಿ ಸುಳ್ಳುಗಳಿಗೆ ಸರಿಯಾದ ಉತ್ತರ ಕೊಡಿ. ಬಡ್ತಿಯಲ್ಲಿ ಮೀಸಲಾತಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯಿತು. ಅದನ್ನು ಮೊದಲಿಗೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಗುತ್ತಿಗೆಯಲ್ಲಿ ಮೀಸಲಾತಿ ಮೊದಲಿಗೆ ತಂದಿದ್ದು ನಮ್ಮ ಸರ್ಕಾರ. ಇದನ್ನು ನಾಡಿನ‌ ಜನತೆ ಅರ್ಥಮಾಡಿಕೊಳ್ಳಬೇಕು ಎಂದರು.

ನಾನು ಹೇಳಿದ್ದೀನಿ ಎನ್ನುವ ಕಾರಣಕ್ಕೆ ನೀವು ಇದನ್ನೆಲ್ಲಾ ನಂಬಬೇಡಿ. ಸತ್ಯ, ಸುಳ್ಳನ್ನು ಪರಾಮರ್ಷಿಸಿ, ವಿವೇಚಿಸಿ. ಸತ್ಯವನ್ನು ಧೈರ್ಯವಾಗಿ-ಬಹಿರಂಗವಾಗಿ ಮಾತಾಡುವ ಧೈರ್ಯವನ್ನು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಬೆಳೆಸಿಕೊಳ್ಳಬೇಕು. ಇದೇ ಮಹರ್ಷಿ ವಾಲ್ಮೀಕಿ ಅವರಿಗೆ ನಾವು-ನೀವು ಸಲ್ಲಿಸುವ ಗೌರವ ಎಂದರು.

ರಾಜನಹಳ್ಳಿ ವಾಲ್ಮೀಕಿ ಸಮುದಾಯದ ಮಠದ ಜಗದ್ಗುರು ಪ್ರಸನ್ನಾ ನಂದಪುರಿ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಕೆ.ಪಾಟೀಲ್, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವನಗೌಡ ದದ್ದಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, KKRDB ಅಧ್ಯಕ್ಷರಾದ ಅಜಯ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಸೇರಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.‌

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

21 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

22 hours ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

1 day ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

2 days ago

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

5 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

6 days ago