ಉಡುಪಿ: ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಬಾರ್ಕೂರು ಮೂಲದ ನಾಗೇಶ್ ಪೂಜಾರಿ (31) ಎನ್ನುವಾತನಿಗೆ ಈ ಹಿಂದೆ ಬ್ರಹ್ಮಾವರ ಜೆ.ಎಂ.ಎಫ್.ಸಿ ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ಧುಗೊಳಿಸಿದ ಹಿನ್ನೆಲೆಯಲ್ಲಿ ಕಳೆದ ವಾರ ಉಡುಪಿ ಸೆನ್ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದಿದ್ದರು.
ನಂತರ ಅ.16 ಬುಧವಾರದಂದು ಆರೋಪಿಯ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದ್ದು ಜಾಮೀನು ಅರ್ಜಿ ಮೇಲಿನ ಆದೇಶವನ್ನು ಅ.21 ಸೋಮವಾರಕ್ಕೆ ನಿಗದಿಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…