ಉಡುಪಿ: ಪೆಟ್ರೋಲ್ ಲೀಕ್ ಆಗಿ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಚಿಟ್ಪಾಡಿಯ ಪೆಟ್ರೋಲ್ ಪಂಪ್ ಬಳಿ ಸಂಭವಿಸಿದೆ.
ಪೆಟ್ರೋಲ್ ಪಂಪ್ ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ ಪೆಟ್ರೋಲ್ ತುಂಬಿದ ಬಾಟಲಿಯನ್ನು ಸ್ಕೂಟರ್ ಢಿಕ್ಕಿಯ ಒಳಗೆ ಇರಿಸಿದ್ದರು. ಬಾಟಲಿಯ ಪೆಟ್ರೋಲ್ ಲೀಕ್ ಆಗಿ ಇಂಜಿನ್ ಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಸ್ಥಳೀಯ ಪೆಟ್ರೋಲ್ ಪಂಪ್ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟು ನಂದಿಸುವಲ್ಲಿ ಯಶಸ್ವಿಯಾದರು.
ಇವರ ಸಮಯಪ್ರಜ್ಞೆಯಿಂದಾಗಿ ನಡೆಯಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಘಟನೆ ನಡೆದ ಸ್ಥಳದಿಂದ ಕೆಲವೇ ಅಂತರದಲ್ಲಿ ಹಲವು ಬಸ್ ಮತ್ತು ಇತರ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…