ಜನ ಮನದ ನಾಡಿ ಮಿಡಿತ

Advertisement

ಸವಣೂರು ಸೀತಾರಾಮ ರೈಯವರಿಗೆ RUPSA ರಾಜ್ಯ ಪ್ರಶಸ್ತಿ : ಅ.21 ರಂದು ಬೆಂಗಳೂರಿನ ಜುಬಿ ಅಂತರಾಷ್ಟ್ರೀಯ “ಶಾಲಾ ಆಡಿಟೋರಿಯಂನಲ್ಲಿ ಪ್ರಶಸ್ತಿ ಪ್ರದಾನ

ಸವಣೂರು: ಕರ್ನಾಟಕ ರಾಜ್ಯ ಮಾನ್ಯತೆ ಪಡೆದ ಅನುದಾನರಹಿತ ಶಾಲೆಗಳ ಸಂಘ (Recognised Unaided Private Schools’ Association of Karnataka) ಪ್ರಶಸ್ತಿಯು ಸವಣೂರಿನ ಶಿಲ್ಪಿ, ಸಹಕಾರ ರತ್ನ ಸವಣೂರು ಸೀತಾರಾಮ ರೈಯವರಿಗೆ ಒಲಿದು ಬಂದಿದೆ.

 

ಅಕ್ಟೋಬರ್ 21ರಂದು ಬೆಂಗಳೂರಿನ ಜುಬ್ಲಿ ಅಂತರರಾಷ್ಟ್ರೀಯ ಶಾಲಾ ಆಡಿಟೋರಿಯಂನಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಇತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ

ಸವಣೂರು ಸೀತಾರಾಮ ರೈ ಅವರು ಸವಣೂರಿನಲ್ಲಿ 2001 ರಲ್ಲಿ ವಿದ್ಯಾರಶ್ಮಿ ವಿದ್ಯಾಲಯ ಸ್ಥಾಪನೆ ಮಾಡಿದ್ದು, ಆರಂಭದ ಹಂತದಲ್ಲಿ ಎಲ್ ಕೆಜಿಯಿಂದ ಪಿಯುಸಿ ತನಕ ಶಿಕ್ಷಣ ಆರಂಭಿಸಿದರು. 2012 ರಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಸ್ಥಾಪನೆ ಮಾಡಿದ್ದಾರೆ. ಸವಣೂರಿನ ಗ್ರಾಮೀಣ ಪ್ರದೇಶದಲ್ಲಿ ಸುಮಾರು 27 ಎಕ್ರೆ ಜಾಗದಲ್ಲಿ ಶಿಕ್ಷಣ ಸಂಸ್ಥೆಗಳು ಕಾರ್ಯಾಚರಿಸುತ್ತಿದ್ದು, ಬಳಿಕ ಡಿಎಡ್ ಹಾಗೂ ನರ್ಸಿಂಗ್ ಕೋರ್ಸ್ ಆರಂಭಿಸಿದ್ದರು. ಪ್ರಸ್ತುತ ಈ ಕೋರ್ಸ್ ಗಳು ನಿಂತಿವೆ. ಪ್ರಸ್ತುತ ಕೆ.ಜಿ., ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಮತ್ತು ಪದವಿ ಮಟ್ಟದ ಶಿಕ್ಷಣಗಳನ್ನು ನೀಡುತ್ತಿದ್ದಾರೆ. ಸುಮಾರು 850 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಸುಮಾರು 65 ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. 220 ಹುಡುಗರು ಮತ್ತು 180 ಹುಡುಗಿಯರು, ಒಟ್ಟು 400 ಮಕ್ಕಳಿಗೆ ಆಗುವಷ್ಟು ವಸತಿ ನಿಲಯದ ವ್ಯವಸ್ಥೆ ಇದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!