ಮುಲ್ಕಿ: ವಿದ್ಯೆ ನಮ್ಮನ್ನು ಬಾಹ್ಯವಾಗಿ ರೂಪಿಸಿ ಬದುಕನ್ನು ನೀಡುತ್ತದೆ. ಕಲೆ ನಮ್ಮ ಅಂತಃ ರಂಗವನ್ನು ಪ್ರಚೋದಿಸಿ ಹೃದಯವನ್ನು ಅರಳಿಸುತ್ತದೆ. ಬಾಹ್ಯ ಹಾಗೂ ಅಂತಃ ರಂಗದ ವೃದ್ಧಿಯಿಂದ ಜೀವನ ಸಮೃದ್ಧವಾಗುತ್ತದೆ ಹಾಗೂ ಪ್ರಬುದ್ಧವಾಗುತ್ತದೆ. ಆ ಕಡೆಗೆ ಸಾಗುವ ಮನಸ್ಸು ವಿದ್ಯಾರ್ಥಿಗಳಿಗೆ ಆಗಲಿ, ಶಿಕ್ಷಣ ಮತ್ತು ನೃತ್ಯಕಲೆಯಿಂದ ಇದು ಸಾಧ್ಯವಾಗಲಿದೆ, ಜೀವನದ ಪರಿಪೂರ್ಣತೆಗಾಗಿ ನೃತ್ಯಕಲೆ ಪೂರಕವಾಗಬಲ್ಲದು ಎಂದು ಕಿನ್ನಿಗೋಳಿಯ ಶಿವಪ್ರಣಾಮ್ ನೃತ್ಯ ಸಂಸ್ಥೆಯ ನಿರ್ದೇಶಕರಾದ ಅನ್ನಪೂರ್ಣ ರಿತೇಶ್ ಶುಭ ಹಾರೈಸಿದರು.
ಇವರು ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಈ ಶೈಕ್ಷಣಿಕ ವರ್ಷದ ಉಚಿತ ನೃತ್ಯ ತರಗತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶ್ರೀ ಶಾರದಾ ಸೊಸೈಟಿಯ ಅಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ನೃತ್ಯಕಲೆ ನಮ್ಮ ಹೃದಯದ ಭಾಷೆ. ಈ ಕಲೆಯಲ್ಲಿ ಎಲ್ಲಾ ಶಿಕ್ಷಣವೂ ಇದೆ. ಹಾಗಾಗಿ ಶಿಕ್ಷಣದಲ್ಲಿ ನೃತ್ಯಕಲೆ ಇರಲೇಬೇಕು. ಇದರಿಂದ ಹೃದಯವಂತ ಸುಸಂಸ್ಕೃತ ವ್ಯಕ್ತಿಗಳ ನಿರ್ಮಾಣ ಸಾಧ್ಯವಾಗಿ ಮಾನವರಾಗಿ ಈ ಸಮಾಜದಲ್ಲಿ ಬದುಕಬಹುದು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ಶಾರದಾ ಸೊಸೈಟಿಯ ಕೋಶಾಧಿಕಾರಿ ಭುವನಾಭಿರಾಮ ಉಡುಪ, ಶಾಲಾ ಸಂಚಾಲಕರಾದ ದೇವಪ್ರಸಾದ್ ಪುನರೂರು, ನೃತ್ಯ ತರಬೇತುದಾರರಾದ ಸುಧಾಕರ್ ಸುರತ್ಕಲ್ ಉಪಸ್ಥಿತರಿದ್ದರು.
ಶಾಲಾ ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ ಸ್ವಾಗತಿಸಿದರು ಸಹ ಶಿಕ್ಷಕಿ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು ಹಾಗೂ ದೀಪಿಕಾ ವಂದಿಸಿದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…