ತೊಕ್ಕೊಟ್ಟು: ರೈಲ್ವೇ ಹಳಿಯ ಎರಡೂ ಬದಿಗಳಲ್ಲಿ ಆಗಂತುಕರಿಬ್ಬರು ಜಲ್ಲಿಕಲ್ಲುಗಳನ್ನಿಟ್ಟ ಪರಿಣಾಮ ಎರಡು ರೈಲುಗಳು ಚಲಿಸುವ ಸಂದರ್ಭ ದೊಡ್ಡ ಸದ್ದು ಸ್ಥಳೀಯರಿಗೆ ಕೇಳಿಬಂದಿದ್ದು, ಸ್ಥಳೀಯರು ರೈಲ್ವೇ ಹಳಿಯತ್ತ ದೌಡಾಯಿಸಿದ್ದಾರೆ.
ತಡರಾತ್ರಿ 08:05 ರ ಸುಮಾರಿಗೆ ಕೊರಗಜ್ಜನ ಅಗೆಲು ಮುಗಿಸಿ ವಾಪಸ್ಸಾಗುತ್ತಿದ್ದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿವಾಸಿ ಮಹಿಳೆಯರು ಹಳಿಯಲ್ಲಿ ಇಬ್ಬರು ಆಗಂತುಕರನ್ನು ಕಂಡಿದ್ದರು. ಅಲ್ಲಿಂದ ಮನೆಗೆ ತಲುಪುವಷ್ಟರಲ್ಲಿ ರೈಲೊಂದು ಕೇರಳ ಕಡೆಗೆ ತೆರಳಿತ್ತು. ಈ ವೇಳೆ ದೊಡ್ಡ ಸದ್ದು ಆವರಿಸಿತ್ತು. ಅದನ್ನು ಸ್ಥಳೀಯರು ಅಷ್ಟು ಗಂಭೀರವಾಗಿ ಪರಿಗಣಿಸಿರಲಿಲ್ಲ. ಬಳಿಕ ಇನ್ನೊಂದು ರೈಲು ಚಲಿಸುವಾಗ ಮತ್ತೊಮ್ಮೆ ದೊಡ್ಡ ಸದ್ದು ಆವರಿಸಿತ್ತು. ಪರಿಣಾಮ ಸ್ಥಳೀಯ ಕೆಲವು ಮನೆಗಳಲ್ಲಿಯೂ ಕಂಪನವುoಟಾಗಿತ್ತು. ತಕ್ಷಣವೇ ರೈಲು ಅಪಘಾತವೆಂದು ಭಾವಿಸಿ ಹಳಿಯತ್ತ ದೌಡಾಯಿಸಿದಾಗ ಹಳಿ ಮೇಲಿರಿಸಲಾದ ಜಲ್ಲಿಕಲ್ಲುಗಳು ತುಂಡಾಗಿರುವುದು ಅಲ್ಪಸ್ವಲ್ಪ ಕಂಡುಬoದಿದೆ. 40 ವರ್ಷಗಳಿಂದ ತೊಕ್ಕೊಟ್ಟು ಪರಿಸರದಲ್ಲಿ ನೆಲೆಸಿದ್ದೇವೆ. ಆದರೆ ರೈಲು ದಾಟುವಾಗ ಕಂಪನದ ಅನುಭವ ಇದೇ ಮೊದಲ ಬಾರಿಗೆ ಆಗಿದೆ ಅನ್ನುವ ಅಭಿಪ್ರಾಯವನ್ನು ಸ್ಥಳೀಯ ಮಹಿಳೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ರೈಲ್ವೇ ಪೊಲೀಸ್ ಠಾಣೆ ಮತ್ತು ಉಳ್ಳಾಲ ಪೊಲೀಸ್ ಠಾಣೆಗೆ ಸ್ಥಳೀಯರು ಮಾಹಿತಿಯನ್ನು ನೀಡಿದ್ದಾರೆ. ಓವರ್ ಬ್ರಿಡ್ಜ್ ಕೆಳಗಡೆ ನಿತ್ಯ ಅಪರಿಚಿತರು ಬಂದು ಕುಳಿತು ಪಾನಮತ್ತರಾಗಿ ತೆರಳುತ್ತಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲವು ದೂರುಗಳೇ ಇವೆ. ಇದೀಗ ಸಂಭಾವ್ಯ ಅನಾಹುತ ತಪ್ಪಿದೆ. ಮುಂದೊoದು ದಿನ ಅಪಾಯ ನಡೆಯುವ ಮುನ್ನ ಎಚ್ಚೆತ್ತು, ಸಂಬoಧಪಟ್ಟ ಇಲಾಖೆ ಸಿಸಿಟಿವಿ ಅಳವಡಿಸಬೇಕು ಅನ್ನುವ ಆಗ್ರಹ ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…