ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ತಾಲೂಕಿನ ಮೊಡಂಕಾಪು ಶಾಲೆಯಲ್ಲಿ ಮಸ್ಟರಿಂಗ್ ( ಪೂರ್ವತಯಾರಿ) ಕಾರ್ಯ

ಬಂಟ್ವಾಳ: ಅ.21 ರಂದು ಸೋಮವಾರ ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆಗೆ ಇಂದು ಬಂಟ್ವಾಳ ತಾಲೂಕಿನ ಮೊಡಂಕಾಪು ಶಾಲೆಯಲ್ಲಿ ಮಸ್ಟರಿಂಗ್ ( ಪೂರ್ವತಯಾರಿ) ಕಾರ್ಯ ನಡೆಯಿತು.
ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಮೊಡಂಕಾಪು ಮಸ್ಟರಿಂಗ್ ನಡೆಯುವ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ,ಬಳಿಕ ತಾಲೂಕು ತಹಶಿಲ್ದಾರ್ ಅರ್ಚನಾ ಭಟ್ ಅವರಲ್ಲಿ ತಯಾರಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ, ಗ್ರಾಮಾಂತರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಗಳಾದ ರಾಮಕೃಷ್ಣ, ಹರೀಶ್, ಸುತೇಶ್, ಸಂಜೀವ,ಉಪತಹಶೀಲ್ದಾರ್ ಗಳಾದ ನವೀನ್ ಬೆಂಜನಪದವು, ನರೇಂದ್ರ ಭಟ್, ಕಂದಾಯ ನಿರೀಕ್ಷಕ ಜನಾರ್ಧನ,ವಿಜಯ್, ಪ್ರಶಾಂತ್ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.

ಮತದಾನ ಎಲ್ಲಿ, ಮತದಾರರೆಷ್ಟು?
ಬಂಟ್ವಾಳ ತಾಲೂಕಿನಲ್ಲಿ ಒಟ್ಟು 795 ಮತದಾರರಿದ್ದು,ಅದರಲ್ಲಿ 381 ಗಂಡು,414 ಹೆಣ್ಣು ಮತದಾರರಿದ್ದಾರೆ. 51 ಗ್ರಾಮಪಂಚಾಯತ್ ಗಳಲ್ಲಿ , ಒಂದು ಪುರಸಭೆ ( ಬಂಟ್ವಾಳ) ಒಂದು ಪಟ್ಟಣಪಂಚಾಯತ್ (ವಿಟ್ಲ) ಹೀಗೆ ಒಟ್ಟು 53 ಕೇಂದ್ರಗಳಲ್ಲಿ ನಾಳೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭಗೊಂಡು ಸಂಜೆ 4 ರ ತನಕ‌ ಮತದಾನ ನಡೆಯಲಿದೆ.
53 ಕಡೆಗಳಲ್ಲಿ ನಡೆಯುವ ಮತದಾನ ಕೇಂದ್ರಗಳಿಗೆ ಒಟ್ಟು 6 ಸೆಕ್ಟರ್ ಅಧಿಕಾರಿಗಳನ್ನು 53 ಪಿ.ಆರ್.ಒ, 53 ಎಪಿಆರ್ ಒ, 53 ಪಿ.ಒ ಅಧಿಕಾರಿಗಳನ್ನು ಹಾಗೂ 53 ಡಿ.ಗ್ರೂಪ್ ನೌಕರರು ಸೇರಿದಂತೆ ಒಟ್ಟು 216 ಸಿಬ್ಬಂದಿಗಳನ್ನು ಮತ್ತು 5 ಮೈಕ್ರೋ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಹಶಿಲ್ದಾರ್ ಅರ್ಚನಾ ಭಟ್ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಯಿಂದ ಮಸ್ಟರಿಂಗ್ ಕಾರ್ಯ ಆರಂಭವಾಗಿದ್ದು, ನಾಳೆ ಸಂಜೆ ಇದೇ ಶಾಲೆಯಲ್ಲಿ 4.30 ರಿಂದ ಡಿ.ಮಸ್ಟರಿಂಗ್ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!