ಬಂಟ್ವಾಳ: ಅ.21 ರಂದು ಸೋಮವಾರ ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆಗೆ ಇಂದು ಬಂಟ್ವಾಳ ತಾಲೂಕಿನ ಮೊಡಂಕಾಪು ಶಾಲೆಯಲ್ಲಿ ಮಸ್ಟರಿಂಗ್ ( ಪೂರ್ವತಯಾರಿ) ಕಾರ್ಯ ನಡೆಯಿತು.
ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಮೊಡಂಕಾಪು ಮಸ್ಟರಿಂಗ್ ನಡೆಯುವ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ,ಬಳಿಕ ತಾಲೂಕು ತಹಶಿಲ್ದಾರ್ ಅರ್ಚನಾ ಭಟ್ ಅವರಲ್ಲಿ ತಯಾರಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ, ಗ್ರಾಮಾಂತರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಗಳಾದ ರಾಮಕೃಷ್ಣ, ಹರೀಶ್, ಸುತೇಶ್, ಸಂಜೀವ,ಉಪತಹಶೀಲ್ದಾರ್ ಗಳಾದ ನವೀನ್ ಬೆಂಜನಪದವು, ನರೇಂದ್ರ ಭಟ್, ಕಂದಾಯ ನಿರೀಕ್ಷಕ ಜನಾರ್ಧನ,ವಿಜಯ್, ಪ್ರಶಾಂತ್ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.
ಮತದಾನ ಎಲ್ಲಿ, ಮತದಾರರೆಷ್ಟು?
ಬಂಟ್ವಾಳ ತಾಲೂಕಿನಲ್ಲಿ ಒಟ್ಟು 795 ಮತದಾರರಿದ್ದು,ಅದರಲ್ಲಿ 381 ಗಂಡು,414 ಹೆಣ್ಣು ಮತದಾರರಿದ್ದಾರೆ. 51 ಗ್ರಾಮಪಂಚಾಯತ್ ಗಳಲ್ಲಿ , ಒಂದು ಪುರಸಭೆ ( ಬಂಟ್ವಾಳ) ಒಂದು ಪಟ್ಟಣಪಂಚಾಯತ್ (ವಿಟ್ಲ) ಹೀಗೆ ಒಟ್ಟು 53 ಕೇಂದ್ರಗಳಲ್ಲಿ ನಾಳೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭಗೊಂಡು ಸಂಜೆ 4 ರ ತನಕ ಮತದಾನ ನಡೆಯಲಿದೆ.
53 ಕಡೆಗಳಲ್ಲಿ ನಡೆಯುವ ಮತದಾನ ಕೇಂದ್ರಗಳಿಗೆ ಒಟ್ಟು 6 ಸೆಕ್ಟರ್ ಅಧಿಕಾರಿಗಳನ್ನು 53 ಪಿ.ಆರ್.ಒ, 53 ಎಪಿಆರ್ ಒ, 53 ಪಿ.ಒ ಅಧಿಕಾರಿಗಳನ್ನು ಹಾಗೂ 53 ಡಿ.ಗ್ರೂಪ್ ನೌಕರರು ಸೇರಿದಂತೆ ಒಟ್ಟು 216 ಸಿಬ್ಬಂದಿಗಳನ್ನು ಮತ್ತು 5 ಮೈಕ್ರೋ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಹಶಿಲ್ದಾರ್ ಅರ್ಚನಾ ಭಟ್ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಯಿಂದ ಮಸ್ಟರಿಂಗ್ ಕಾರ್ಯ ಆರಂಭವಾಗಿದ್ದು, ನಾಳೆ ಸಂಜೆ ಇದೇ ಶಾಲೆಯಲ್ಲಿ 4.30 ರಿಂದ ಡಿ.ಮಸ್ಟರಿಂಗ್ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…