ಮುಲ್ಕಿ: ಹಳೆಯಂಗಡಿ ಸಮೀಪದ ಸಸಿಹಿತ್ಲು ನಿವಾಸಿ ಕಾಂತು ಲಕ್ಕಣ ಯಾನೆ ಯಾದವ ಬಂಗೇರ(73) ರವರು ಶನಿವಾರ ಸಂಜೆ ನಿಧನರಾದರು. ಅವರು ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಅವರು ಮುಲ್ಕಿ ಸೀಮೆಯ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಅಂತಿಮ ಕ್ರಿಯೆಗಳು ಭಾನುವಾರ ಸಸಿಹಿತ್ಲು ವಿನಲ್ಲಿ ನಡೆಯಲಿದೆ.

ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜಾ, ಕೆಪಿಸಿಸಿ ಕೊ-ಆರ್ಡಿನೇಟರ್ ವಸಂತ್ ಬೆರ್ನಾಡ್ , ಹಳೆಯಂಗಡಿ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಸಸಿಹಿತ್ಲು, ಚಂದ್ರಕುಮಾರ್, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್ ಕೊಳುವೈಲು, ಮುಲ್ಕಿ ವಿಜಯ ರೈತರ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಡಾ. ಹರೀಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಸಾರಂತಾಯ ಗೆರೋಡಿಯ ಆಡಳಿತ ಮಂಡಳಿಯ ಸದಸ್ಯರು ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



