ಕರ್ನಾಟಕದ ಅನೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಭಾರತದ ಬಹುತೇಕ ಕಡೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನ್ ಎದ್ದಿರುವುದರಿಂದ ಸದ್ಯಕ್ಕೆ ಮಳೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ಇಂದು ಸೇರಿದಂತೆ ಮುಂದಿನ ಕೆಲನ ದಿನಗಳ ಕಾಲ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಿಂಗಾರು ಮಳೆ ಆರಂಭವಾದ ಕೂಡಲೇ ಉತ್ತರ ಭಾರತದಲ್ಲಿ ಚಳಿ ಹೆಚ್ಚಾಗಲಾರಂಭಿಸಿದ್ದು, ದಕ್ಷಿಣ ಭಾರತದ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಸೈಕ್ಲೋನ್ ಆರ್ಭಟ ಜೋರಾಗಿದ್ದು, ಬಂಗಾಳದ ಆಕಾಶದಲ್ಲಿ ಚಂಡಮಾರುತದ ಲಕ್ಷಣಗಳು ಕಾಣುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಈ ಚಂಡಮಾರುತವು ಪೂರ್ವ ಮಧ್ಯ ಬಂಗಾಳ ಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರದ ಬಳಿ ಕಡಿಮೆ ಒತ್ತಡವಾಗಿ ಬದಲಾಗುತ್ತದೆ.
ಇದರ ಪರಿಣಾಮ ಅಕ್ಟೋಬರ್ 22 ಮಂಗಳವಾರದ ತನಕ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಮತ್ತೊಂದೆಡೆ ತಮಿಳುನಾಡು, ಕೇರಳ, ಕರಾವಳಿ ಆಂಧ್ರಪ್ರದೇಶ ಮತ್ತು ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಗೋವಾ ಮತ್ತು ಕೊಂಕಣ ಸೇರಿದಂತೆ ಇತರ ರಾಜ್ಯಗಳಲ್ಲಿ ಚಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ವಿಜಯನಗರ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮತ್ತೊಂದೆಡೆ ಮುಂಜಾನೆಯೇ ಭಾರೀ ಮಳೆ ಸುರಿಯುತ್ತಿದ್ದರಿಂದ ಬೆಂಗಳೂರು ನಗರದ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.ಇನ್ನು, ಅಕ್ಟೋಬರ್ 21 ರಿಂದ 25 ರವರೆಗೆ, ಕರ್ನಾಟಕ, ತಮಿಳುನಾಡು, ಕೇರಳ, ಒಡಿಶಾ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಂತಹ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಹೆಚ್ಚುವರಿ ಎಚ್ಚರಿಕೆ ನೀಡಿದೆ. ಈ ಅವಧಿಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಆರೆಂಜ್ ಅಲರ್ಟ್ ಮುಂದುವರಿಯಲಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…