ಮಂಗಳೂರು : – ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆ ಇಂದು ನಡೆಯುತ್ತಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಉಭಯ ಜಿಲ್ಲೆಗಳು ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಶಾಸಕರು ಮತ್ತು ಸಂಸದರು ಈ ಕ್ಷೇತ್ರದ ಮತದಾರರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 223 ಗ್ರಾಮ ಪಂಚಾಯತ್‍ಗಳ 3,263 ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ 65, ಎರಡು ನಗರ ಸಭೆಗಳಲ್ಲಿ 64, 3 ಪುರಸಭೆಗಳಲ್ಲಿ 74 ಹಾಗೂ 5 ನಗರ ಪಂಚಾಯತ್ ನಲ್ಲಿ 86 ಮಂದಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.
ಉಡುಪಿ ಜಿಲ್ಲೆಯಲ್ಲಿ 153 ಗ್ರಾಮ ಪಂಚಾಯತ್ ಗಳಲ್ಲಿ 2,355 ಸದಸ್ಯರು, ಉಡುಪಿ ನಗರ ಸಭೆಯಲ್ಲಿ 36, 3 ಪುರಸಭೆಯಲ್ಲಿ 72 ಹಾಗೂ ಒಂದು ನಗರ ಪಂಚಾಯತ್ ನಲ್ಲಿ 17 ಮಂದಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.
ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ 234 ಮತಗಟ್ಟೆಯಲ್ಲಿ 3,552 ಮತದಾರರಿದ್ದಾರೆ, ಇವರಲ್ಲಿ ಪುರುಷ ಮತದಾರರು- 1,710, ಮಹಿಳಾ ಮತದಾರರ ಸಂಖ್ಯೆ – 1,842. ಉಡುಪಿ ಜಿಲ್ಲೆಯ 158 ಮತಗಟ್ಟೆಯಲ್ಲಿ 2,480 ಮತದಾರರಿದ್ದಾರೆ. ಇವರಲ್ಲಿ 1,195 ಪುರುಷ ಮತದಾರರಿದ್ದರೆ, 1,285 ಮಹಿಳಾ ಮತದಾರರಿದ್ದಾರೆ. ಒಟ್ಟಾರೆಯಾಗಿ ಎರಡು ಜಿಲ್ಲೆಗಳ 392 ಮತಗಟ್ಟೆಗಳಲ್ಲಿ 6,032 ಮತದಾರರು ಮತಚಲಾಯಿಸಲಿದ್ದಾರೆ.
ತಾಲೂಕುವಾರು ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯಧಿಕ ಅಂದರೆ 49 ಮತಗಟ್ಟೆಗಳಿವೆ. ಬಂಟ್ವಾಳ ತಾಲೂಕಿನಲ್ಲಿ ಅತ್ಯಧಿಕ ಅಂದರೆ 793 ಮತದಾರರಿದ್ದಾರೆ. ಹೆಬ್ರಿ ತಾಲೂಕಿನಲ್ಲಿ ಅತಿ ಕಡಿಮೆ ಅಂದರೆ 9 ಮತಗಟ್ಟೆಗಳು ಹಾಗೂ 122 ಮತದಾರರಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಡಪ್ಪಾಡಿ ಪಂಚಾಯತ್ ಹಾಗೂ ಕೊಣಾಜೆ ಪಂಚಾಯತ್ ಮತಗಟ್ಟೆಗಳಲ್ಲಿ ಅತಿ ಕಡಿಮೆ ಮತದಾರರು ಅಂದರೆ ತಲಾ 5 ಮತದಾರರು ಇದ್ದಾರೆ ಹಾಗೂ ಉಡುಪಿ ಜಿಲ್ಲೆಯ ಹಳ್ಳಿಹೊಳೆ ಮತ್ತು ಎಡಮೊಗೆ ಗ್ರಾಮ ಪಂಚಾಯತ್ ಮತಗಟ್ಟೆಗಳಲ್ಲಿ ತಲಾ 6 ಮತದಾರರು ಇದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಮತಗಟ್ಟೆಯಲ್ಲಿಅತ್ಯಧಿಕ ಅಂದರೆ (65) ಮತದಾರರಿದ್ದಾರೆ, ಹಾಗೂ ಉಡುಪಿ ಜಿಲ್ಲೆಯ ಶಿರೂರು ಗ್ರಾಮ ಪಂಚಾಯತ್ ನಲ್ಲಿ 44 ಮಂದಿ ಮತದಾರರಿದ್ದಾರೆ.
ಚುನಾವಣೆ ನಡೆಸಲು 392 ಮತಗಟ್ಟೆಗಳಿಗೆ 470 ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮೈಕ್ರೋ ಆಬ್ಸರ್ವರ್ ಗಳನ್ನು ನೇಮಿಸಲಾಗಿದೆ.
ಮತ ಎಣಿಕೆ ಮಂಗಳೂರು ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 24ರಂದು ನಡೆಯಲಿದೆ.
ಚುನಾವಣಾ ಕಣದಲ್ಲಿ ಬಿ.ಜೆ.ಪಿ.ಯಿಂದ ಕಿಶೋರ್ ಬಿ.ಆರ್ , ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನಿಂದ ರಾಜು ಪೂಜಾರಿ , ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದಿಂದ ಅನ್ವರ್ ಸಾದತ್.ಎಸ್, ಮತ್ತು ಪಕ್ಷೇತರರಾಗಿ ದಿನಕರ ಉಳ್ಳಾಲ ಸ್ಪರ್ಧಾಕಣದಲ್ಲಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…