ಜನ ಮನದ ನಾಡಿ ಮಿಡಿತ

Advertisement

ಮಾದಕ ವ್ಯಸನಗಳ ಬಗ್ಗೆ ಯುವಜನತೆ ಜಾಗೃತರಾಗಿರಿ : ಸಹಾಯಕ ಪೊಲೀಸ್ ಆಯುಕ್ತೆ ಗೀತಾ ಕುಲಕರ್ಣಿ

ಮಂಗಳೂರು : ನಗರದ ಮಾತಾ ಅಮೃತಾನಂದಮಯಿ ಮಠದ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ವತಿಯಿಂದ ಮಾದಕ ವ್ಯಸನಗಳ ವಿರುದ್ಧ ಯುವ ಜನರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

 

ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣರವರ ನಿರ್ದೇಶನದಂತೆ ಮಂಗಳೂರಿನ ಅಮೃತ ವಿದ್ಯಾಲಯಂನಲ್ಲಿ ಜರುಗಿದ ಈ ವಿಶೇಷ ವಿಚಾರ ಸಂಕೀರ್ಣ ಕಾರ್ಯಕ್ರಮದ‌ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಹಾಯಕ ಪೊಲೀಸ್ ಆಯುಕ್ತರಾದ ಗೀತಾ ಕುಲಕರ್ಣಿಯವರು”ಮಾದಕದ್ರವ್ಯ ವ್ಯಸನ ಮತ್ತು ಪರಿಹಾರೋಪಾಯಗಳು” ಎಂಬ ವಿಷಯದ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ವೈದ್ಯರ ಸಲಹೆಯಂತೆ ಪಡೆಯುವ ಔಷಧಗಳು ಅಧಿಕೃತ. ವೈದ್ಯರ ಸಲಹೆ ಇಲ್ಲದೆ ಪಡೆಯುವ ಔಷಧಗಳು ಅಕ್ರಮ ಹಾಗೂ ಹಾನಿಕಾರಕ ಪರಿಣಾಮಗಳನ್ನು ಬೀರುತ್ತವೆ. ಯುವಜನರು ಹಾಗೂ ವಿದ್ಯಾರ್ಥಿಗಳು ಮಾದಕದ್ರವ್ಯ ವ್ಯಸನಗಳಿಗೆ ಬಲಿಯಾಗದಂತೆ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದರು. ಪೋಷಕರು ಮಕ್ಕಳ ಭವಿಷ್ಯದ ಬಗ್ಗೆ ಭರವಸೆಯನ್ನು ಹೊಂದಿ ಉತ್ತಮ ಶಿಕ್ಷಣವನ್ನು ನೀಡಲು ಮುಂದಾಗುವರು. ಅವರ ನಿರೀಕ್ಷೆಯಂತೆ ಜೀವನದಲ್ಲಿ ಉನ್ನತ ಮೌಲ್ಯಗಳನ್ನು ಅಳವಡಿಸಿ ಮುನ್ನಡೆಯುವಂತೆ ಅವರು ಕರೆಯಿತ್ತರು.

 

ಇನ್ನೋರ್ವ ಅತಿಥಿ ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ಸಹಾಯಕ ನಿರ್ದೇಶಕರಾದ ಸೂರ್ಯನಾರಾಯಣ ಭಟ್ ಅವರು “ಆಧುನಿಕ ಸಮಾಜದಲ್ಲಿ ಸಮೂಹ ಮಾಧ್ಯಮಗಳ ಬಳಕೆ” ಬಗ್ಗೆ ಮಾತನಾಡಿ ಮಾಧ್ಯಮಗಳು ಬೆಳೆದುಬಂದ ಮೈಲಿಗಲ್ಲುಗಳ ಬಗ್ಗೆ ಮಾಹಿತಿ ನೀಡಿದರು.

ನವೀನ ಮಾಧ್ಯಮದ ಕುರಿತು ಮಾತಾಡಿದ ಅವರು ಶಿಕ್ಷಣ, ಮಾಹಿತಿ ಮತ್ತು ಮನರಂಜನೆಗಾಗಿ ಮಾಧ್ಯಮಗಳು ಬಳಕೆಯಾಗುತ್ತವೆ. ಇದರಲ್ಲಿ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗುತ್ತದೆ. ಆದುದರಿಂದ ಮಾಹಿತಿಗಳನ್ನು ಹಂಚಿಕೊಳ್ಳುವಾಗ ಅತ್ಯಂತ ಎಚ್ಚರಿಕೆ ಅಗತ್ಯ ಎಂದು ತಿಳಿಸಿದರು.ಅಮೃತಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ಗೌರವ ಸಲಹೆಗಾರ ಡಾ. ಜೀವರಾಜ್ ಸೊರಕೆ ಅಮ್ಮ ಮತ್ತು ಆಶ್ರಮದ ಪರಿಚಯ ನೀಡಿದರು. ಕೇಂದ್ರದ ಅಧ್ಯಕ್ಷ ಡಾ.ವಸಂತಕುಮಾರ ಪೆರ್ಲ ಅವರು 2018 ರಿಂದ ಅತ್ಯುತ್ತಮ ಕಾರ್ಯಕ್ರಮಗಳೊಂದಿಗೆ ಯುವ ಸಮುದಾಯಕ್ಕೆ ಸ್ಪೂರ್ತಿ ತುಂಬುವ ಕಾರ್ಯ ಯಶಸ್ವಿಯಾಗಿ ಈ ಕೇಂದ್ರದಿಂದ ನಡೆಯುತ್ತಿದೆ ಎಂದರು. ಅಮೃತ ವಿದ್ಯಾಲಯಂ ಪ್ರಾಂಶುಪಾಲರಾದ ಅಕ್ಷತಾ ಶೆಣೈ ಅತಿಥಿಗಳ ಪರಿಚಯವಿತ್ತರು. ಅತಿಥಿಗಳು ಶ್ರೀ ಬ್ರಹ್ಮಸ್ಥಾನ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರಾಭಿವೃದ್ಧಿ ಸಮಿತಿ ಹಾಗೂ ಸೇವಾ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.

ಡಾ.ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಸ್ವಾಗತಿಸಿದರು, ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಅಮಿನ್ ವಂದಿಸಿದರು. ಪ್ರವೀಣ್ ಚಂದ್ರ ಶರ್ಮ ವಂದಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!