ಮಂಗಳೂರು : ನಗರದ ಮಾತಾ ಅಮೃತಾನಂದಮಯಿ ಮಠದ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ವತಿಯಿಂದ ಮಾದಕ ವ್ಯಸನಗಳ ವಿರುದ್ಧ ಯುವ ಜನರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣರವರ ನಿರ್ದೇಶನದಂತೆ ಮಂಗಳೂರಿನ ಅಮೃತ ವಿದ್ಯಾಲಯಂನಲ್ಲಿ ಜರುಗಿದ ಈ ವಿಶೇಷ ವಿಚಾರ ಸಂಕೀರ್ಣ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಹಾಯಕ ಪೊಲೀಸ್ ಆಯುಕ್ತರಾದ ಗೀತಾ ಕುಲಕರ್ಣಿಯವರು”ಮಾದಕದ್ರವ್ಯ ವ್ಯಸನ ಮತ್ತು ಪರಿಹಾರೋಪಾಯಗಳು” ಎಂಬ ವಿಷಯದ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ವೈದ್ಯರ ಸಲಹೆಯಂತೆ ಪಡೆಯುವ ಔಷಧಗಳು ಅಧಿಕೃತ. ವೈದ್ಯರ ಸಲಹೆ ಇಲ್ಲದೆ ಪಡೆಯುವ ಔಷಧಗಳು ಅಕ್ರಮ ಹಾಗೂ ಹಾನಿಕಾರಕ ಪರಿಣಾಮಗಳನ್ನು ಬೀರುತ್ತವೆ. ಯುವಜನರು ಹಾಗೂ ವಿದ್ಯಾರ್ಥಿಗಳು ಮಾದಕದ್ರವ್ಯ ವ್ಯಸನಗಳಿಗೆ ಬಲಿಯಾಗದಂತೆ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದರು. ಪೋಷಕರು ಮಕ್ಕಳ ಭವಿಷ್ಯದ ಬಗ್ಗೆ ಭರವಸೆಯನ್ನು ಹೊಂದಿ ಉತ್ತಮ ಶಿಕ್ಷಣವನ್ನು ನೀಡಲು ಮುಂದಾಗುವರು. ಅವರ ನಿರೀಕ್ಷೆಯಂತೆ ಜೀವನದಲ್ಲಿ ಉನ್ನತ ಮೌಲ್ಯಗಳನ್ನು ಅಳವಡಿಸಿ ಮುನ್ನಡೆಯುವಂತೆ ಅವರು ಕರೆಯಿತ್ತರು.
ಇನ್ನೋರ್ವ ಅತಿಥಿ ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ಸಹಾಯಕ ನಿರ್ದೇಶಕರಾದ ಸೂರ್ಯನಾರಾಯಣ ಭಟ್ ಅವರು “ಆಧುನಿಕ ಸಮಾಜದಲ್ಲಿ ಸಮೂಹ ಮಾಧ್ಯಮಗಳ ಬಳಕೆ” ಬಗ್ಗೆ ಮಾತನಾಡಿ ಮಾಧ್ಯಮಗಳು ಬೆಳೆದುಬಂದ ಮೈಲಿಗಲ್ಲುಗಳ ಬಗ್ಗೆ ಮಾಹಿತಿ ನೀಡಿದರು.
ನವೀನ ಮಾಧ್ಯಮದ ಕುರಿತು ಮಾತಾಡಿದ ಅವರು ಶಿಕ್ಷಣ, ಮಾಹಿತಿ ಮತ್ತು ಮನರಂಜನೆಗಾಗಿ ಮಾಧ್ಯಮಗಳು ಬಳಕೆಯಾಗುತ್ತವೆ. ಇದರಲ್ಲಿ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗುತ್ತದೆ. ಆದುದರಿಂದ ಮಾಹಿತಿಗಳನ್ನು ಹಂಚಿಕೊಳ್ಳುವಾಗ ಅತ್ಯಂತ ಎಚ್ಚರಿಕೆ ಅಗತ್ಯ ಎಂದು ತಿಳಿಸಿದರು.ಅಮೃತಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ಗೌರವ ಸಲಹೆಗಾರ ಡಾ. ಜೀವರಾಜ್ ಸೊರಕೆ ಅಮ್ಮ ಮತ್ತು ಆಶ್ರಮದ ಪರಿಚಯ ನೀಡಿದರು. ಕೇಂದ್ರದ ಅಧ್ಯಕ್ಷ ಡಾ.ವಸಂತಕುಮಾರ ಪೆರ್ಲ ಅವರು 2018 ರಿಂದ ಅತ್ಯುತ್ತಮ ಕಾರ್ಯಕ್ರಮಗಳೊಂದಿಗೆ ಯುವ ಸಮುದಾಯಕ್ಕೆ ಸ್ಪೂರ್ತಿ ತುಂಬುವ ಕಾರ್ಯ ಯಶಸ್ವಿಯಾಗಿ ಈ ಕೇಂದ್ರದಿಂದ ನಡೆಯುತ್ತಿದೆ ಎಂದರು. ಅಮೃತ ವಿದ್ಯಾಲಯಂ ಪ್ರಾಂಶುಪಾಲರಾದ ಅಕ್ಷತಾ ಶೆಣೈ ಅತಿಥಿಗಳ ಪರಿಚಯವಿತ್ತರು. ಅತಿಥಿಗಳು ಶ್ರೀ ಬ್ರಹ್ಮಸ್ಥಾನ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರಾಭಿವೃದ್ಧಿ ಸಮಿತಿ ಹಾಗೂ ಸೇವಾ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.
ಡಾ.ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಸ್ವಾಗತಿಸಿದರು, ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಅಮಿನ್ ವಂದಿಸಿದರು. ಪ್ರವೀಣ್ ಚಂದ್ರ ಶರ್ಮ ವಂದಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…