ಮೂಡುಬಿದಿರೆ : ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್‌ನಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ಕ್ರೀಡಾಕೂಟದಲ್ಲಿ ಎಲ್‌ಐಸಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ತಂಡದ ಸದಸ್ಯೆ, ಆಳ್ವಾಸ್ ಕಾಲೇಜಿನ ಹಳೆ ವಿದ್ಯಾರ್ಥಿನಿ ಶಿರ್ತಾಡಿಯ ಜಾಯ್ಲಿನ್ ಲೋಬೊ ಅವರು ಲಾಂಗ್ ಜಂಪ್ ಮತ್ತು ಟ್ರಿಬ್ಬಲ್ ಜಂಪ್ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮೂಲಕ ಚಿನ್ನದ ಪದಕ ಹಾಗೂ 4×100 ಮತ್ತು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕ ಗಳಿಸಿ ಗಮನ ಸೆಳೆದರು. ಹೈಜಂಪ್‌ನಲ್ಲಿ ಸುಪ್ರೀತ್ ರಾಜ್ ಗೆ ಚಿನ್ನ, ಜಾವೆಲಿನ್ ಮತ್ತು ಶಾಟ್‌ಪುಟ್ ಕ್ರೀಡೆಯಲ್ಲಿ ಶಹೆಜಹಾನಿ ರವರು ಚಿನ್ನದ ಪದಕ ಮತ್ತು 4×100 ರಿಲೇ ಓಟದಲ್ಲಿ ಬೆಳ್ಳಿ ಪದಕ ಗೆದ್ದ ಹಿರಿಮೆಗೆ ಪಾತ್ರರಾದರು.
ಇತರ ಕ್ರೀಡಾಪಟುಗಳಾದ ಹರ್ಷಿಣಿ ಅವರು ಹೈಜಂಪ್‌ನಲ್ಲಿ ಚಿನ್ನ, ಟ್ರಿಪ್ಪಲ್ ಜಂಪ್ ಹಾಗು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ತಂಡದ ಸಾಧನೆಗೆ ಗಣನೀಯ ಕೊಡುಗೆ ನೀಡಿದರು. ಈ ಮೂಲಕ ಎಲ್ ಐಸಿ ತಂಡ ಐದು ವಿಭಾಗಳಲ್ಲಿ ಚಾಂಪಿಯನ್ ಅಗಿ ಹೊರಹೊಮ್ಮಿತು.
ಎಲ್ ಐ ಸಿ ತಂಡವು ಪುರುಷರ ಹಾಗೂ ಮಹಿಳಾ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಆಗುವುದರ ಜೊತೆಗೆ ಪುರುಷರ ಫೀಲ್ಡ್ ಮತ್ತು ಟ್ರಾಕ್ ಚಾಂಪಿಯನ್, ಮಹಿಳಾ ಫೀಲ್ಡ್ ಚಾಂಪಿಯನ್ ಪ್ರಶಸ್ತಿಗೂ ಪಾತ್ರವಾಯಿತು.
ಕ್ರೀಡಾಕೂಟದಲ್ಲಿ ಗಣನೀಯ ಸಾಧನೆ ಮಾಡಿದ ತಂಡದ ಸದಸ್ಯರಿಗೆ ಎಲ್‌ಐಸಿ ಸಂಸ್ಥೆಯು ಅಭಿನಂದಿಸಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…