ಕಿನ್ನಿಗೋಳಿಯ ಯುಗಪುರುಷದ ನೇತೃತ್ವದಲ್ಲಿ ಕಿನ್ನಿಗೋಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.), ಭ್ರಾಮರೀ ಮಹಿಳಾ ಸಮಾಜ (ರಿ.) ಮೆನ್ನಬೆಟ್ಟು, ಲಯನ್ಸ್ ಹಾಗೂ ಲಿಯೋ ಕ್ಲಬ್, ರೋಟರಿ ಕ್ಲಬ್, ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.), ಯಕ್ಷಲಹರಿ (ರಿ.), ವಿಜಯಾ ಕಲಾವಿದರು, ಕರ್ನಾಟಕ ಸ್ಟೇಟ್ ಟೈಲರ್‍ಸ್ ಅಸೋಸಿಯೇಶನ್ ಕಿನ್ನಿಗೋಳಿ ವಲಯ, ಸೌತ್ ಕೆನರಾ ಫೋಟೋಗ್ರಾಫರ್‍ಸ್ ಅಸೋಸಿಯೇಶನ್ ಮೂಲ್ಕಿ ವಲಯ ಹಾಗೂ ಲಯನ್ಸ್ ಕ್ಲಬ್ ಬಪ್ಪನಾಡು ಇನ್‌ಸ್ಪಾಯರ್ ಸಂಸ್ಥೆಗಳ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ಇದೇ ಅಕ್ಟೋಬರ್ 31ರಂದು ಗುರುವಾರ ಸಾಯಂ. ಗಂಟೆ 3ಕ್ಕೆ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಜರಗಲಿದೆ.

ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು ಮಧ್ಯಾಹ್ನ ಗಂಟೆ 3ಕ್ಕೆ ಗೂಡುದೀಪ ಪ್ರದರ್ಶಿಸಬೇಕು. ಸಾಂಪ್ರದಾಯಿಕ ಹಾಗೂ ಆಧುನಿಕ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧಾ ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಅಂತೆಯೇ ಭಾಗವಹಿಸುವವರಿಗೆ ನಗದು ಹಾಗೂ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಯುಗಪುರುಷದ ಕೊಡೆತ್ತೂರು ಭುವನಾಭಿರಾಮ ಉಡುಪರು ತಿಳಿಸಿದ್ದಾರೆ.



