ಮಂಗಳೂರು: ವಿಧಾನಪರಿಷತ್ತಿಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪಚುನಾವಣೆ್ಯ ಮತಗಳ ಎಣಿಕೆ ಇಂದು ಆರಂಭಗೊಂಡಿದೆ. ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ.
ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ” ಗ್ರೂಪ್ ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್ ಗೆ 33 ರಂತೆ ಹಂಚಿಕೆ ಮಾಡಲಾಗುತ್ತದೆ.
ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಗುತ್ತದೆ.
ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಘೋಷಿಸಲಾಗುವುದು.
ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…