ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಸಂಭವಿಸಿದೆ.
ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಆಯಿಷಾ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ. ರಿಕ್ಷಾದಲ್ಲಿದ್ದ ಇತರೆ ನಾಲ್ವರು ವಿದ್ಯಾರ್ಥಿಗಳು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ರಿಕ್ಷಾ ಚಾಲಕನಿಗೂ ಗಾಯವಾಗಿದೆ. ಗಾಯಾಳುಗಳನ್ನು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿನಿ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ದೇರಳಕಟ್ಟೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಜೆ ಸಾರಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…