ಜನ ಮನದ ನಾಡಿ ಮಿಡಿತ

Advertisement

ಪುಣ್ಯಕೋಟಿ ನಗರದ ಶಾಲಾ ಆವರಣದ ಹತ್ತಿರದಲ್ಲೇ ಬಾರ್ & ರೆಸ್ಟೋರೆಂಟ್; ಮಳೆಯನ್ನು ಲೆಕ್ಕಿಸದೆ ವಿದ್ಯಾರ್ಥಿಗಳ ಹೋರಾಟ

ಉಳ್ಳಾಲ : ಶಾಲೆಯ ಬಳಿ ಬಾರ್‌ ತೆರೆಯುವುದು ಕಾನೂನುಬಾಹಿರ. ಶಿಕ್ಷಣ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ಮದ್ಯದ ಅಂಗಡಿಗಳನ್ನು ನಡೆಸಬಾರದು ಎಂದು ನಿಯಮವಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪುವಿನ ಬಾಳೆ ಪುಣಿ ಗ್ರಾಮದ ಪುಣ್ಯಕೋಟಿ ನಗರದಲ್ಲಿ ಶಾಲಾ ಆವರಣದ ಹತ್ತಿರದಲ್ಲೇ ಬಾರ್ & ರೆಸ್ಟೋರೆಂಟ್ ಒಂದು ಆರಂಭವಾಗಿದೆ. ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಪ್ರಾರಂಭವಾದ ಹಿನ್ನಲೆ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದ ಘಟನೆ ನಡೆದಿದೆ.


ನಗರದ ಶಾರದಾ ಗಣಪತಿ ವಿದ್ಯಾಕೇಂದ್ರದ ಆವರಣದ ಬಳಿಯಲ್ಲೇ ಬಾರ್‌ ರೆಸ್ಟೋರೆಂಟ್ ನಿರ್ಮಾಣಗೊಂಡಿದ್ದು, ಇದೀಗ ಕೇಂದ್ರವನ್ನು ಸ್ಥಳಾಂತರಿಸುವಂತೆ ವಿದ್ಯಾರ್ಥಿಗಳು ಮಳೆಯ ನಡುವೆಯು ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಯಮಗಳನ್ನು ಗಾಳಿಗೆ ತೂರಿದ ಬಾರ್ ಗೆ ಸ್ಥಳೀಯ ಪಂಚಾಯತ್ ಆಡಳಿತವು ನಿರಾಕ್ಷೇಪಣಾ ಪತ್ರ ನೀಡಿರುವುದಾಗಿ ಆರೋಪಗಳು ಕೇಳಿಬಂದಿವೆ. ಬಾರ್ ಅನ್ನು ಕೂಡಲೇ ಸ್ಥಳಾಂತರಿಸುವಂತೆ ಆಗ್ರಹಿಸಿ ಶಾರದಾ ವಿದ್ಯಾಗಣಪತಿ ಶಾಲೆಯ ನೂರಾರು ವಿದ್ಯಾರ್ಥಿಗಳು ಬಾಳೆಪುಣಿ ಪಂಚಾಯತ್ ಗೆ ಮುತ್ತಿಗೆ ಹಾಕಿ ಪಂಚಾಯತ್ ಅಧ್ಯಕ್ಷೆ ರಝಿಯಾ ಅವರಿಗೆ ಮನವಿ ಸಲ್ಲಿಸಿದರು. ಬಾರ್‌ ಅಂಡ್‌ ರಸ್ಟೋರೆಂಟ್‌ ನ್ನು ಮುಚ್ಚುವರೆಗೂ ಅಮರಣಾಂತ ಸತ್ಯಾಗ್ರಹದಂತಹ ಹೋರಾಟ ನಡೆಸಲು ಶಾಲಾಡಳಿತ ಮಂಡಳಿ ಸಿದ್ಧವಿದೆ ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜಾರಾಮ ಭಟ್ ಹೇಳಿದರು.


ಶಾಲಾ ವಿದ್ಯಾರ್ಥಿನಿ ರಶ್ಮಿತ ಮಾತನಾಡಿ, ಶಾಲೆಯ ಆವರಣದ ಸುತ್ತಮುತ್ತಲಿನಲ್ಲಿ ಬಾರ್ ಹಾಗೂ ಇನ್ನಿತರ ಮಾದಕ ವಸ್ತುಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾದರೂ ನಡೆಯುತ್ತಿರುವ ಮಾರಾಟ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ಆದಷ್ಟು ಬೇಗ ಸರಿಪಡಿಸಿ ಓದುತ್ತಿರುವ ಮಕ್ಕಳಿಗೆ ಸಹಾಯ ಮಾಡಬೇಕೆಂದು ಮನವಿ ಮಾಡಿದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!