ಉಳ್ಳಾಲ : ಶಾಲೆಯ ಬಳಿ ಬಾರ್ ತೆರೆಯುವುದು ಕಾನೂನುಬಾಹಿರ. ಶಿಕ್ಷಣ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ಮದ್ಯದ ಅಂಗಡಿಗಳನ್ನು ನಡೆಸಬಾರದು ಎಂದು ನಿಯಮವಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪುವಿನ ಬಾಳೆ ಪುಣಿ ಗ್ರಾಮದ ಪುಣ್ಯಕೋಟಿ ನಗರದಲ್ಲಿ ಶಾಲಾ ಆವರಣದ ಹತ್ತಿರದಲ್ಲೇ ಬಾರ್ & ರೆಸ್ಟೋರೆಂಟ್ ಒಂದು ಆರಂಭವಾಗಿದೆ. ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಪ್ರಾರಂಭವಾದ ಹಿನ್ನಲೆ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದ ಘಟನೆ ನಡೆದಿದೆ.
ನಗರದ ಶಾರದಾ ಗಣಪತಿ ವಿದ್ಯಾಕೇಂದ್ರದ ಆವರಣದ ಬಳಿಯಲ್ಲೇ ಬಾರ್ ರೆಸ್ಟೋರೆಂಟ್ ನಿರ್ಮಾಣಗೊಂಡಿದ್ದು, ಇದೀಗ ಕೇಂದ್ರವನ್ನು ಸ್ಥಳಾಂತರಿಸುವಂತೆ ವಿದ್ಯಾರ್ಥಿಗಳು ಮಳೆಯ ನಡುವೆಯು ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಯಮಗಳನ್ನು ಗಾಳಿಗೆ ತೂರಿದ ಬಾರ್ ಗೆ ಸ್ಥಳೀಯ ಪಂಚಾಯತ್ ಆಡಳಿತವು ನಿರಾಕ್ಷೇಪಣಾ ಪತ್ರ ನೀಡಿರುವುದಾಗಿ ಆರೋಪಗಳು ಕೇಳಿಬಂದಿವೆ. ಬಾರ್ ಅನ್ನು ಕೂಡಲೇ ಸ್ಥಳಾಂತರಿಸುವಂತೆ ಆಗ್ರಹಿಸಿ ಶಾರದಾ ವಿದ್ಯಾಗಣಪತಿ ಶಾಲೆಯ ನೂರಾರು ವಿದ್ಯಾರ್ಥಿಗಳು ಬಾಳೆಪುಣಿ ಪಂಚಾಯತ್ ಗೆ ಮುತ್ತಿಗೆ ಹಾಕಿ ಪಂಚಾಯತ್ ಅಧ್ಯಕ್ಷೆ ರಝಿಯಾ ಅವರಿಗೆ ಮನವಿ ಸಲ್ಲಿಸಿದರು. ಬಾರ್ ಅಂಡ್ ರಸ್ಟೋರೆಂಟ್ ನ್ನು ಮುಚ್ಚುವರೆಗೂ ಅಮರಣಾಂತ ಸತ್ಯಾಗ್ರಹದಂತಹ ಹೋರಾಟ ನಡೆಸಲು ಶಾಲಾಡಳಿತ ಮಂಡಳಿ ಸಿದ್ಧವಿದೆ ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜಾರಾಮ ಭಟ್ ಹೇಳಿದರು.
ಶಾಲಾ ವಿದ್ಯಾರ್ಥಿನಿ ರಶ್ಮಿತ ಮಾತನಾಡಿ, ಶಾಲೆಯ ಆವರಣದ ಸುತ್ತಮುತ್ತಲಿನಲ್ಲಿ ಬಾರ್ ಹಾಗೂ ಇನ್ನಿತರ ಮಾದಕ ವಸ್ತುಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾದರೂ ನಡೆಯುತ್ತಿರುವ ಮಾರಾಟ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ಆದಷ್ಟು ಬೇಗ ಸರಿಪಡಿಸಿ ಓದುತ್ತಿರುವ ಮಕ್ಕಳಿಗೆ ಸಹಾಯ ಮಾಡಬೇಕೆಂದು ಮನವಿ ಮಾಡಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…