ಜನ ಮನದ ನಾಡಿ ಮಿಡಿತ

Advertisement

ಬೆಲೆಬಾಳುವ ಸಾಗುವಾನಿ, ದೇವದಾರು ಮರಗಳ ಸಾಗಾಟ: ಪ್ರಕರಣ ದಾಖಲು..!

ಮಂಗಳೂರಿನ ಮಲ್ಲಿಕಟ್ಟೆಯ ಲೋಕೋಪಯೋಗಿ ನಿರೀಕ್ಷಣ ಮಂದಿರದ ಆವರಣದಲ್ಲಿ ಬೆಲೆಬಾಳುವ ಸಾಗುವಾನಿ, ದೇವದಾರು ಮರಗಳನ್ನು ಕಡಿದು ಸಾಗಿಸಿರುವ ಕುರಿತು ರಾಷ್ಟ್ರೀಯ ಪರಿಸರ ಸಂರಕ್ಷಣ ಒಕ್ಕೂಟ(ಎನ್‌ಇಸಿಎಫ್‌) ನೀಡಿದ ದೂರಿನಂತೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ.

 


ನಿರೀಕ್ಷಣ ಮಂದಿರಕ್ಕೆ ಅಪಾಯವಿದೆ ಎಂದು ಹೇಳಿ ಲೋಕೋಪಯೋಗಿ ಇಲಾಖೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ 3 ಸಾಗುವಾನಿ, 1 ಉಪ್ಪಳಿಗೆ, 1 ಕಂಬ ಅಶೋಕ, ಹಾಗೂ 1 ದೇವದಾರು ಮರ ಕಡಿಯಲು ಅನುಮತಿ ನೀಡಲಾಗಿತ್ತು. ಆದರೆ ಇಲಾಖೆಯ ಅನುಮತಿ ಇಲ್ಲದೆ ದೇವದಾರು ಮರವನ್ನು ಸ್ಥಳದಿಂದ ಸಾಗಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಮರ ಕಡಿಯಲು ಗುತ್ತಿಗೆ ಪಡೆದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮರ ಕಡಿಯುತ್ತಿರುವುದು ಎನ್‌ಇಸಿಎಫ್‌ ಸದಸ್ಯರೊಬ್ಬರ ಗಮನಕ್ಕೆ ಬಂದಿದ್ದು, ಮಂಗಳವಾರ ವಾಹನದಲ್ಲಿ ಮರ ಸಾಗಾಟ ಮಾಡುವ ವೇಳೆ ಅರಣ್ಯ ಸಂಚಾರ ದಳಕ್ಕೆ ಮಾಹಿತಿ ನೀಡಿದ್ದಾರೆ. ಮರ ಸಾಗಾಟದ ವಾಹನ ಹೊಯ್ಗೆ ಬಜಾರ್‌ನ ಇಲಾಖಾ ನಾಟ ಸಂಗ್ರಹಾಲಯದಲ್ಲಿರುವುದು ಪತ್ತೆಯಾಗಿದೆ. ವಾಹನವನ್ನು ಪರಿಶೀಲಿ ಸಿದಾಗ ಅದರಲ್ಲಿ ದೇವದಾರು ಜಾತಿಯ ಮರದ ಕಟ್ಟಿಗೆ ಇರುವುದು ಕಂಡು ಬಂದಿದೆ. ಚಾಲಕನಲ್ಲಿ ವಿಚಾರಿಸಿದಾಗ ಮರ ಸಾಗಾಟಕ್ಕೆ ಪರವಾನಿಗೆ ಇಲ್ಲ ಎಂದು ತಿಳಿಸಿದ್ದಾನೆ. ಅರಣ್ಯ ಸಂಚಾರಿ ದಳ ಅಧಿಕಾರಿಗಳು ಮಲ್ಲಿಕಟ್ಟೆಯ ಲೋಕೋಪಯೋಗಿ ನಿರೀಕ್ಷಣ ಮಂದಿರಕ್ಕೆ ಭೇಟಿ ನೀಡಿದಾಗ 4 ಸಾಗುವಾನಿ, 1 ಉಪ್ಪಳಿಗೆ, 1 ಕಂಬ ಅಶೋಕ, ಹಾಗೂ 1 ದೇವದಾರು ಮರಗಳನ್ನು ಕಡಿದಿರುವುದು ಕಂಡು ಬಂದಿದೆ. ವಿವಿಧ ಅಳತೆಯ 24 ಸಾಗುವಾನಿ ದಿಮ್ಮಿಗಳನ್ನು ದಾಸ್ತಾನು ಇರಿಸಿರುವುದು ಕಂಡು ಬಂದಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!