ಕರಾವಳಿ

ಮುಲ್ಕಿ: ನಾದಸ್ವರ ವಾದಕ ನಾಗೇಶ್ ಬಪ್ಪನಾಡು ರವರಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿ ಅಭಿನಂದನೆ

ಮುಲ್ಕಿ: ಖ್ಯಾತ ನಾದಸ್ವರ ವಾದಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ವಿದ್ವಾನ್‌ ನಾಗೇಶ್‌ ಬಪ್ಪನಾಡು ರವರಿಗೆ ಆಕಾಶವಾಣಿ ನವದೆಹಲಿ ಉನ್ನತ ಶ್ರೇಣಿಯ ಕಲಾವಿದ (ಟಾಪ್ ಗ್ರೇಡ್) ಮಾನ್ಯತೆ ನೀಡಿರುವುದನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಸ್ವಾಗತಿಸಿದ್ದು ಅವರನ್ನು ಅಭಿನಂದಿಸಿದ್ದಾರೆ.

ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಮಾತನಾಡಿ ಕಳೆದ ಹಲವಾರು ವರ್ಷಗಳಿಂದ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಾದಸ್ವರದ ಮೂಲಕ ಕಲೆಯನ್ನು ಆರಾಧಿಸಿಕೊಂಡು ಬರುತ್ತಿದ್ದು ಜನಮನ್ನಣೆ ಗಳಿಸಿದ್ದಾರೆ. ಅವರ ಕಲೆಯ ಆರಾಧನೆ ನಿರಂತರವಾಗಿ ನಡೆದು ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಪ್ರಶಸ್ತಿಗಳು ಲಭಿಸಲಿ ಎಂದು ಹಾರೈಸಿದ್ದಾರೆ.

ನಾದಸ್ವರ ವಾದಕ ನಾಗೇಶ್ ಬಪ್ಪನಾಡು ರವರನ್ನು ಮುಲ್ಕಿ ಸೀಮೆ ಅರಸರು ಹಾಗೂ ಶ್ರೀ ಬಪ್ಪನಾಡು ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ,
ಕಸಾಪ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಕಾರ್ನಾಡ್ ಹರಿಹರ ಕ್ಷೇತ್ರದ ಆಡಳಿತ ಮೊಕ್ತೇಸರ ಅರವಿಂದ ಪೂಂಜಾ, ಗೋಪಾಲಕೃಷ್ಣ ಭಟ್ ಬಪ್ಪನಾಡು, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ,ಮುಲ್ಕಿ ನ ಪಂ ಅಧ್ಯಕ್ಷ ಸತೀಶ್ ಅಂಚನ್, ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಸದಸ್ಯರಾದ ಪುತ್ತು ಬಾವ ,ಬಾಲಚಂದ್ರ ಕಾಮತ್, ಹರ್ಷರಾಜ ಶೆಟ್ಟಿ, ಸುಭಾಷ್ ಶೆಟ್ಟಿ, ಡಾ. ಹರಿಶ್ಚಂದ್ರ ಪಿ ಸಾಲ್ಯಾನ್,ಉದ್ಯಮಿ ವಾಸು ಪೂಜಾರಿ ಚಿತ್ರಾಪು, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ರಂಗ ಕರ್ಮಿ ಚಂದ್ರಶೇಖರ ಸುವರ್ಣ ಮುಲ್ಕಿ, ಶಿವಶಂಕರ್ ವರ್ಮ
ಉದಯಕುಮಾರ್ ಶೆಟ್ಟಿ ಅಧಿಧನ್ ಮುಲ್ಕಿ, ಮತ್ತಿತರರು ಅಭಿನಂದಿಸಿದ್ದಾರೆ.
ಮೊದಲ ಬಾರಿಗೆ ನಾದಸ್ವರ ಕಲಾವಿದರಿಗೆ ಈ ಮಾನ್ಯತೆ ಲಭಿಸಿದೆ. ತಂದೆ ಅಣ್ಣು ಶೇರಿಗಾರ ಮತ್ತು ಸುಪ್ರಸಿದ್ಧ ನಾದಸ್ವರ ವಾದಕ ಕಿವುಳೂರು ಎನ್.ಜಿ ಗಣೇಶನ್ ಅವರಿಂದ ನಾದಸ್ವರ ಶಿಕ್ಷಣ ಪಡೆದಿರುವ ನಾಗೇಶ್ ಅವರಿಗೆ ಕರ್ನಾಟಕ ರಾಜ್ಯೋತ್ಸವ, ತಮಿಳುನಾಡು ಮುಖ್ಯಮಂತ್ರಿ ಯವರಿಂದ ನಾದಸ್ವರ ಸೆಲ್ವಂ ಮುಂತಾದ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳು ಸಂದಿವೆ

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

3 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

4 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

7 days ago