ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲಗುತ್ತು ನೇತೃತ್ವದಲ್ಲಿ ಕಲಾವಿದರಿಗೆ ನಿರ್ಮಾಣ ಮಾಡುತ್ತಿರುವ, ಪಟ್ಟ ಯಕ್ಷಾಶ್ರಯ 31ನೇ ಮನೆ ಸರಪಾಡಿಯಲ್ಲಿ ಹಸ್ತಾಂತರಗೊಂಡಿತು.
ಉದ್ಯಮಿ ಬಿ.ರಘುನಾಥ ಸೋಮಯಾಜಿ ಕೊಡುಗೆ ನೀಡಿದ ಈ ಮನೆಯನ್ನು ಸರಪಾಡಿ ಗ್ರಾಮದ ಮಠದಬೆಟ್ಟು ಎಂಬಲ್ಲಿ ಧರ್ಮಸ್ಥಳ ಮೇಳದ ಕಲಾವಿದ ಚಂದ್ರಶೇಖರ ಸರಪಾಡಿ ಅವರು ಕುಟುಂಬಕ್ಕೆ ಹಸ್ತಾಂತರಿಸಿ ಗೃಹಪ್ರವೇಶ ನೆರವೇರಿ ಸಲಾಯಿತು.ಕೇಂದ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಮಾತನಾಡಿ, ಒಂಬತ್ತು ವರ್ಷಗಳಲ್ಲಿ ಯಕ್ಷಗಾನ ಕಲಾವಿದರಿಗೆ ಸುಮಾರು 13 ಕೋಟಿ ವೆಚ್ಚದಲ್ಲಿ ವಿವಿಧ ರೀತಿಯಲ್ಲಿ ನೆರವು ನೀಡಲಾಗಿದ್ದು, ದಾನಿಗಳ ನೆರವಿನಿಂದ ಮುಂದಿನ ಒಂದೂವರೆ ವರ್ಷದಲ್ಲಿ 100 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದರು.
ಬೆಂಗಳೂರಿನ ಉದ್ಯಮಿ ಆರ್. ಕೆ.ಭಟ್, ಬಂಟ್ವಾಳ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ, ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡ ಮಾತನಾಡಿದರು.
ಕಲಾವಿದ ಚಂದ್ರಶೇಖರ ಸರಪಾಡಿ ದಂಪತಿ, ಪೋಷಕರಾದ ಗಂಗಯ್ಯ ನಾಯ್, ಪ್ರೇಮಾ, ಉಮೇಶ್ ಮಠದಬೆಟ್ಟು ಭಾಗವಹಿಸಿದ್ದರು.
ಸರಪಾಡಿ ಘಟಕದ ಸಂಚಾಲಕ ಸರಪಾಡಿ ಅಶೋಕ ಶೆಟ್ಟಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶು ಧನಂಜಯ ಶೆಟ್ಟಿ ನಾಡಬೆಟ್ಟು ಕಾರ್ಯಕ್ರಮ ನಿರೂಪಿಸಿದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…