ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ 2024ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಉಡುಪಿಯ ಪೂರ್ಣಿಮ ಸುರೇಶ್ ಅವರ ‘ಸಂತೆಯೊಳಗಿನ ಏಕಾಂತ’ ಮತ್ತು ಕಲಬುರ್ಗಿಯ ಕಾವ್ಯಶ್ರೀ ಮಹಾಗಾಂವಕರ ಅವರ ‘ಒಲವ ಒರತೆಯ ಜಾಡಿನಲ್ಲಿ’ ಎಂಬ ಎರಡು ಹಸ್ತಪ್ರತಿಗಳು ಗೆದ್ದುಕೊಂಡಿವೆ.
ಈ ಎರಡೂ ಹಸ್ತಪ್ರತಿಗಳು ತೀರ್ಪುಗಾರರಿಂದ ಸಮಾನ ಅಂಕಗಳನ್ನು ಪಡೆದಿರುವುದರಿಂದ ಎರಡು ಹಸ್ತಪ್ರತಿಗಳನ್ನು ಕೂಡಾ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ಕನ್ನಡ ಸಂಘದ ಸ್ಥಾಪಕಾಧ್ಯಕ್ಷ ಡಾ.ನಾ.ಮೊಗಸಾಲೆ ಅವರು ಘೋಷಿಸಿದ್ದಾರೆ. ಈ ಸಾಲಿನ ಸ್ಪರ್ಧೆಗೆ ಐವತ್ತ ಒಂಬತ್ತು ಹಸ್ತಪ್ರತಿಗಳು ಬಂದಿದ್ದು ಪ್ರಸಿದ್ಧ ವಿಮರ್ಶಕ ಮತ್ತು ಕತೆಗಾರ ಬೆಳಗೋಡು ರಮೇಶ ಭಟ್ (ವಿಭಾವರಿ ಭಟ್), ಮೈಸೂರು ಮತ್ತು ಹೊಸಪೀಳಿಗೆಯ ಮಹತ್ವದ ವಿಮರ್ಶಕರಾಗಿ ಬೆಳೆಯುತ್ತಿರುವ ವಿಕಾಸ ಹೊಸಮನಿ ಹಾವೇರಿ ಹಾಗೂ ಡಾ. ರವಿಶಂಕರ ಜಿ.ಕೆ. ಉಜಿರೆ ಅವರುಗಳು ನೀಡಿದ ಅಂಕಗಳ ಆಧಾರದಲ್ಲಿ ಈ ಪ್ರಶಸ್ತಿಗಳನ್ನು ನಿರ್ಣಯಿಸಲಾಗಿದೆ.
೧೯೭೯ರಲ್ಲಿ ನಂದಳಿಕೆಯ ವರಕವಿ ಮುದ್ದಣನ ಹೆಸರಿನಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಯು ತಲಾ ಹತ್ತು ಸಾವಿರದ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದ್ದು ಪ್ರತೀ ವರುಷದಂತೆ ಈ ವರುಷದ ಪ್ರಶಸ್ತಿ ಪ್ರದಾನ ಸಮಾರಂಭವು ೨೦೨೫ರ ಫೆಬ್ರವರಿ ತಿಂಗಳಲ್ಲಿ ಕಾಂತಾವರದ ‘ಕನ್ನಡ ಭವನ’ದಲ್ಲಿ ನಡೆಯಲಿದ್ದು ಪ್ರಶಸ್ತಿಯ ಪ್ರಾಯೋಜಕರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅವರು ಪ್ರಶಸ್ತಿ ಪ್ರದಾನವನ್ನು ನೆರವೇರಿಸಲಿರುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…