ಪುತ್ತೂರು – ಉಪ್ಪಿನಂಗಡಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮತ್ತು ಕೇಪುಳು ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಸ್ಕೂಟರ್ ನಲ್ಲಿದ್ದ ಸವಾರ ಮತ್ತು ಹಿಂಬದಿ ಸವಾರೆ ಹಾಗು ಬೈಕ್ ಸವಾರನಿಗೆ ಗಾಯವಾಗಿದೆ. ಸ್ಕೂಟರ್ ಹಿಂಬದಿ ಸವಾರೆ ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಂಚಾರ ಪೊಲೀಸರು ಆಗಮಿಸಿ ಮಾಹಿತಿ ಪಡೆದು ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.



