ದಿನಾಂಕ. 29.10.2024ರಂದು ನರಿಮೊಗರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ ) ಮಂಗಳೂರು.(ಬ್ಯಾಂಕ್ ಆಫ್ ಬರೋಡ ಸಂಯೋಜಿತ ಸಂಸ್ಥೆ) . ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ . ಎನ್ ಆರ್ ಎಲ್ ಎಂ ತಾಲೂಕು ಅಭಿಯಾನ ನಿರ್ವಹಣಾ ಘಟಕ ಪುತ್ತೂರು, ಗ್ರಾಮ ಪಂಚಾಯತ್ ನರಿಮೊಗರು ಮತ್ತು ಶ್ರೀ ದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ) ನರಿಮೊಗರು ಇದರ ಜಂಟಿ ಆಶ್ರಯದಲ್ಲಿ ಹೊಲಿಗೆ ತರಬೇತಿ ಕಾರ್ಯಗಾರ ಸಮಾರೋಪ ಸಮಾರಂಭ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಶ್ರೀಮತಿ ಹರಿಣಿ ವಹಿಸಿ ಶುಭ ಹಾರೈಸಿದರು.
ಕಾರ್ಯ ಗಾರದ ಬಗ್ಗೆ ಪ್ರಾಸ್ತಾವಿಕ ನುಡಿ ಶ್ರೀ ವಿಶ್ವನಾಥ ಶೆಟ್ಟಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ನೆರವೇರಿಸಿ ಎಲ್ಲಾ ಶಿಬಿರಾರ್ಥಿಗಳು ಸ್ವ ಉದ್ಯೋಗ ಮಾಡಬೇಕು ಎಂದು ಹಿತನುಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಜೀವನ್ ಕೊಲ್ಯ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಮಾತನಾಡುತ್ತಾ ಕಾರ್ಯ ಗಾರದ ನಿಯಮ .ಯೋಜನೆ.ಹಾಗೂ ಸ್ವ ಉದ್ಯೋಗಕ್ಕೆ ಸಿಗುವ ಬ್ಯಾಂಕ್ ಸೌಲಭ್ಯಹಾಗು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಕಾರ್ಯ ಕ್ರಮ ಗಳ ಬಗ್ಗೆ ವಿವರಿಸಿದರು. . ಮುಖ್ಯ ಅತಿಥಿಗಳಾಗಿ ರವಿಚಂದ್ರ ಯು ಪಂಚಾಯತ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್ ನರಿಮೊಗ್ರು ಕಾರ್ಯಕ್ರಮದ ಬಗ್ಗೆ, ಸಂಜೀವಿನಿ ಯೋಜನೆಯ ಬಗ್ಗೆ ವಿವರವಾಗಿ ತಿಳಿಸಿದರು ಶ್ರೀ ಸುಧಾಕರ ಕುಲಾಲ್ ನರಿಮೊಗರು ಗ್ರಾಮ ಪಂಚಾಯತ್ ಸದಸ್ಯರು ಶುಭಾಶಯ ಕೋರಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು.
ಶ್ರೀ ದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ( ರಿ) ಅದ್ಯಕ್ಷರು ಶ್ರೀ ಮತಿ ಪೂರ್ಣಿಮ, ತರಬೇತುದಾರರಾದ ಶ್ರೀ ಮತಿ ಪ್ರೀತಿ ಆಚಾರ್ಯ, ಶ್ರೀಮತಿ ನಳಿನಿ ತಾಲೂಕು ವ್ಯವಸ್ಥಾಪಕರು ಕೃಷಿಯೇತರ ಚಟುವಟಿಕೆ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ಮತಿ ಸುನೀತಾ ಸ್ಥಳೀಯ ಸಂಪನ್ಮೂಲ ವ್ಯಕ್ತಿ ಇವರು ನೆರವೇರಿಸಿದರು. ಸಂಜೀವಿನಿ ಮುಖ್ಯ ಪುಸ್ತಕ ಬರಹಗಾರರು ಶ್ರೀಮತಿ ಅನುರಾಧ ಪ್ರಭು ಸ್ವಾಗತಿಸಿದರು .ವಂದನಾರ್ಪಣೆ ಯನ್ನು ಸ್ಥಳೀಯ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಬೇಬಿ ಇವರು ನೆರವೇರಿಸಿದರು. ಕಾರ್ಯ ಕ್ರಮ ದಲ್ಲಿ ಸಂಜೀವಿನಿ ಸದಸ್ಯರು . ಒಕ್ಕೂಟದ ಎಲ್ಲಾ ಪದಾಧಿಕಾರಿಯವರು .ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಶಿಬಿರಾರ್ಥಿಗಳು ಹಾಜರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…