ತೊಕ್ಕೊಟ್ಟು : ಟೆಂಪೋ ಲಾರಿ ಢಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ರಾಷ್ಟಿçÃಯ ಹೆದ್ದಾರಿ 66ರ ತೊಕ್ಕೊಟ್ಟು ಆಡಂಕುದ್ರು ಸಮೀಪ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ. ಅಪಘಾತದಿಂದ ನಿಯಂತ್ರಣ ತಪ್ಪಿದ ಟೆಂಪೋ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಇಲೆಕ್ಟಿçಕ್ ಕಾರಿಗೆ ಢಿಕ್ಕಿ ಹೊಡೆದು ನಂತರ ಅಂಗಡಿಯೊAದರ ನಾಮಫಲಕಗಳ ಗುದ್ದಿ ಕಂದಕಕ್ಕೆ ಉರುಳಿದೆ.

ಫರಂಗಿಪೇಟೆ ತುಂಬೆ ರೊಟ್ಟಿಗುಡ್ಡೆ ಮನೆಯ ಮೊಹಮ್ಮದ್ ಹುಸೈನ್ (64) ಸಾವನ್ನಪ್ಪಿದವರು. ಮಂಗಳೂರಿನಿAದ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ಲಾರಿ ಆಡಂಕುದ್ರು ಸಮೀಪ ಪಾದಚಾರಿ ಮೊಹಮ್ಮದ್ ಹುಸೈನ್ ಅವರಿಗೆ ಢಿಕ್ಕಿ ಹೊಡೆದು, ನಿಯಂತ್ರಣ ತಪ್ಪಿದ ಪರಿಣಾಮ , ರಸ್ತೆಬದಿಯಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟಿçಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಕಾರಿನಲ್ಲಿ ಮಕ್ಕಳು ಕುಳಿತಿದ್ದು , ಚಾಲಕ ಹಾಟ್ ಚಿಪ್ಸ್ ಅಂಗಡಿಗೆ ತೆರಳಿದ್ದರು.

ಅದೃಷ್ಟವಶಾತ್ ಮಕ್ಕಳು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಎದುರುಭಾಗದಲ್ಲಿ ಬಸ್ಸೊಂದು ಕೆಟ್ಟು ನಿಂತಿದ್ದು, ಅದರ ಪ್ರಯಾಣಿಕರನ್ನು ಇನ್ನೊಂದು ಬಸ್ಸಿಗೆ ಹತ್ತಿಸಲಾಗುತಿತ್ತು. ಹುಸೈನ್ ಬಸ್ಸಲ್ಲಿದ್ದವರೋ ಅಥವಾ ಪಾದಚಾರಿಯೋ ಅನ್ನುವ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅಪಘಾತದ ತಕ್ಷಣ ಟೆಂಪೋ ಚಾಲಕ ಸ್ಥಳದಿಂದ ತೆರಳಿ ಉಳ್ಳಾಲ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.



