ಹೇರಂಭ ಇಂಡಸ್ಟ್ರೀಸ್ ಲಿಮಿಟೆಡ್ ಇದರ ಕಾರ್ಯಾಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಮತ್ತು ಬಂಟರ ಸಂಘ ಮುಂಬಯಿಯ ವಿಶ್ವಸ್ಥರಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿಯವರು ಕರ್ನಾಟಕ ರಾಜ್ಯೋತ್ಸವ ಸಂದರ್ಭ ಕರ್ನಾಟಕ ಘನ ಸರಕಾರದ ವತಿಯಿಂದ ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಸ್ವೀಕರಿಸಿ ಬೆಂಗಳೂರಿನಿಂದ ಮುಂಬಯಿಗೆ ಮುಂಬಯಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ಕ್ಕೆ ಆಗಮಿಸಿದ್ದಾರೆ.


ಸಂದರ್ಭ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿಯವರು ಮತ್ತು ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಶ್ರೀ ಪ್ರವೀಣ್ ಭೋಜ ಶೆಟ್ಟಿಯವರು, ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಮಹೇಶ್ ಎಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ ಆರ್ ಕೆ ಶೆಟ್ಟಿ, ಜೊತೆ ಕಾರ್ಯದರ್ಶಿ ಶ್ರೀ ಗಿರೀಶ್ ಶೆಟ್ಟಿ ತೆಳ್ಳಾರ್, ಜೊತೆ ಕೋಶಾಧಿಕಾರಿ ಶ್ರೀ ಶಶಿಧರ ಕೆ ಶೆಟ್ಟಿ ಇನ್ನಂಜೆ, ಪೊನಾಯಿ ಶಿಕ್ಷಣ ಸಮಿತಿ ಕಾರ್ಯಾಧ್ಯಕ್ಷ ರತ್ನಾಕರ್ ಶೆಟ್ಟಿ ಮುಂಡ್ಕೂರು ಮತ್ತು ಕಾರ್ಯದರ್ಶಿ ಗೌತಮ್ ಶೆಟ್ಟಿ, ಹಿರಿಯ ನಾಗರಿಕ ಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷ ಶ್ರೀ ಕೃಷ್ಣ ಶೆಟ್ಟಿ, ಮಧ್ಯವಲಯ ಪ್ರಾದೇಶಿಕ ಸಮಿತಿ ಸಮನ್ವಯಕ ರವೀಂದ್ರನಾಥ್ ಎಮ್ ಭಂಡಾರಿ, ಬಂಟರವಾಣಿ ಗೌರವ ಸಂಪಾದಕ ಅಶೋಕ್ ಪಕ್ಕಳ, ಮಹಿಳಾ ವಿಭಾಗದ ಕಾರ್ಯದರ್ಶಿ ಶ್ರೀಮತಿ ಆಶಾ ಸುಧೀರ್ ಶೆಟ್ಟಿ, ಜೊತೆ ಕಾರ್ಯದರ್ಶಿ ಶ್ರೀಮತಿ ವನಿತಾ ನೋಂಡ ಹಾಗೂ ಶ್ರೀಮತಿ ರಮ್ಯ ಶೆಟ್ಟಿ, ಸಾಂತಾಕ್ರೂಜ್ ಕನ್ನಡ ಸಂಘದ ಅಧ್ಯಕ್ಷೆ ಶ್ರೀಮತಿ ಸುಜಾತ ಶೆಟ್ಟಿ, ವಸಯಿ ಡಹಣು ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಮಂಜುನಾಥ ಎನ್ ಶೆಟ್ಟಿ ಕೊಡ್ಲಾಡಿ ಮತ್ತು ಕಾರ್ಯದರ್ಶಿ ಜಗನ್ನಾಥ್ ಡಿ ಶೆಟ್ಟಿ ಪಳ್ಳಿ, ಪ್ರವೀಣ್ ಶೆಟ್ಟಿ ವರಂಗ ಇವರುಗಳ ಉಪಸ್ಥಿತಿಯಲ್ಲಿ ಪುಷ್ಪಗುಚ್ಛ ನೀಡಿ ಗೌರವಿಸಿ ಸ್ವಾಗತಿಸಿ ಅಭಿನಂದಿಸಿದಾಗ.




