ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ತಾಲೂಕಿನ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್..!!!

ಬಂಟ್ವಾಳ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್ ಮಂಗಳವಾರ ತಡರಾತ್ರಿಗೆ ತುಂಬೆಯ ದೇವಸ್ಥಾನವೊಂದಕ್ಕೆ ನುಗ್ಗಿದ್ದು, ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಬಗ್ಗೆ ವರದಿಯಾಗಿದೆ.

 


ಬಂಟ್ವಾಳ ತಾಲೂಕಿನ ತುಂಬೆಯಲ್ಲಿರುವ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದ ಮುಂಬಾಗಿಲಿನ ಚಿಲಕ ಮುರಿದು ಒಳಗೆ ಪ್ರವೇಶ ಮಾಡಿದ ಕಳ್ಳರು ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ.ದೇವಸ್ಥಾನದ ಕಛೇರಿಯಲ್ಲಿರಿಸಿದ್ದ ಸುಮಾರು ಒಂದುವರೆ ಕೆ.ಜಿ ತೂಕದ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಜಲದ್ರೋಣವನ್ನು ಕಳ್ಳತನ ಮಾಡಲಾಗಿದೆ.ಇದರ ಜೊತೆಗೆ ಗೊದ್ರೇಜ್ , ಕ್ಯಾಸ್ ಡ್ರಾಯರ್ ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಸುಮಾರು 50 ಸಾವಿರದಷ್ಟು ಹಣವನ್ನು ಕೂಡ ಕಳವು ಮಾಡಲಾಗಿದೆ ಎಂದು ಹೇಳಲಾಗಿದೆ.

ದೇವಸ್ಥಾನದ ಸುತ್ತ ಮುಂಜಾಗ್ರತಾ ಕ್ರಮವಾಗಿ ಸಿ.ಸಿ‌.ಕ್ಯಾಮರಾ ಅಳವಡಿಸಲಾಗಿದೆಯಾದರೂ ಕಳ್ಳರ ತಂಡ ಕ್ಯಾಮರಾ ಡಿ.ವಿ‌ಆರ್ ನ್ನು ಕೂಡ ಬಿಡದೆ ಎಗರಿಸಿದ್ದಾರೆ. ಸೋಮವಾರ ಮುಂಜಾನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ದೇವಸ್ಥಾನವೊಂದರ ಕಳವು ನಡೆಯುವುದನ್ನು ಸ್ವತಃ ಅಲ್ಲಿನ ಅರ್ಚಕರು ಸಿ.ಸಿ.ಕ್ಯಾಮರಾ ದ ಮೂಲಕ ನೋಡಿದ್ದಾರೆ ಆದರೂ ಕಳ್ಳರ ಬಳಿ ಮಾರಕಾಸ್ತ್ರಗಳು ಇರುವುದು ಕಂಡು ಬಂದದ್ದರಿಂದ ತಡೆಯಲು ಅಸಾಧ್ಯವಾಗಿತ್ತು. ಮತ್ತು ಈ ಕಳ್ಳತನದ ವಿಡಿಯೋ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು ಸುದ್ದಿಯಾಗಿತ್ತು. ಅಂತಹ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕಳ್ಳರು ಯೋಚಿಸಿಯಾಗಿರಬೇಕು,ಇಲ್ಲಿನ ಸಿ.ಸಿ.ಕ್ಯಾಮರಾ ದ ಪೂಟೇಜ್ ಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.ಇಂದು ಬೆಳಿಗ್ಗೆ ದೇವಸ್ಥಾನದ ಸಿಬ್ಬಂದಿಯೊರ್ವರು 6.ಗಂಟೆಗೆ ಬಂದಾಗ ಮುಂಬಾಗಿಲು ಚಿಲಕ ಮುರಿದಿದ್ದು ಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ದೇವಸ್ಥಾನದ ಸೇವಾ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ ತುಂಬೆಯವರಿಗೆ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ‌.ಹರೀಶ್, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿದ್ದು ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!