ಬಂಟ್ವಾಳ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್ ಮಂಗಳವಾರ ತಡರಾತ್ರಿಗೆ ತುಂಬೆಯ ದೇವಸ್ಥಾನವೊಂದಕ್ಕೆ ನುಗ್ಗಿದ್ದು, ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಬಗ್ಗೆ ವರದಿಯಾಗಿದೆ.
ಬಂಟ್ವಾಳ ತಾಲೂಕಿನ ತುಂಬೆಯಲ್ಲಿರುವ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಮುಂಬಾಗಿಲಿನ ಚಿಲಕ ಮುರಿದು ಒಳಗೆ ಪ್ರವೇಶ ಮಾಡಿದ ಕಳ್ಳರು ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ.ದೇವಸ್ಥಾನದ ಕಛೇರಿಯಲ್ಲಿರಿಸಿದ್ದ ಸುಮಾರು ಒಂದುವರೆ ಕೆ.ಜಿ ತೂಕದ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಜಲದ್ರೋಣವನ್ನು ಕಳ್ಳತನ ಮಾಡಲಾಗಿದೆ.ಇದರ ಜೊತೆಗೆ ಗೊದ್ರೇಜ್ , ಕ್ಯಾಸ್ ಡ್ರಾಯರ್ ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಸುಮಾರು 50 ಸಾವಿರದಷ್ಟು ಹಣವನ್ನು ಕೂಡ ಕಳವು ಮಾಡಲಾಗಿದೆ ಎಂದು ಹೇಳಲಾಗಿದೆ.
ದೇವಸ್ಥಾನದ ಸುತ್ತ ಮುಂಜಾಗ್ರತಾ ಕ್ರಮವಾಗಿ ಸಿ.ಸಿ.ಕ್ಯಾಮರಾ ಅಳವಡಿಸಲಾಗಿದೆಯಾದರೂ ಕಳ್ಳರ ತಂಡ ಕ್ಯಾಮರಾ ಡಿ.ವಿಆರ್ ನ್ನು ಕೂಡ ಬಿಡದೆ ಎಗರಿಸಿದ್ದಾರೆ. ಸೋಮವಾರ ಮುಂಜಾನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ದೇವಸ್ಥಾನವೊಂದರ ಕಳವು ನಡೆಯುವುದನ್ನು ಸ್ವತಃ ಅಲ್ಲಿನ ಅರ್ಚಕರು ಸಿ.ಸಿ.ಕ್ಯಾಮರಾ ದ ಮೂಲಕ ನೋಡಿದ್ದಾರೆ ಆದರೂ ಕಳ್ಳರ ಬಳಿ ಮಾರಕಾಸ್ತ್ರಗಳು ಇರುವುದು ಕಂಡು ಬಂದದ್ದರಿಂದ ತಡೆಯಲು ಅಸಾಧ್ಯವಾಗಿತ್ತು. ಮತ್ತು ಈ ಕಳ್ಳತನದ ವಿಡಿಯೋ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು ಸುದ್ದಿಯಾಗಿತ್ತು. ಅಂತಹ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕಳ್ಳರು ಯೋಚಿಸಿಯಾಗಿರಬೇಕು,ಇಲ್ಲಿನ ಸಿ.ಸಿ.ಕ್ಯಾಮರಾ ದ ಪೂಟೇಜ್ ಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.ಇಂದು ಬೆಳಿಗ್ಗೆ ದೇವಸ್ಥಾನದ ಸಿಬ್ಬಂದಿಯೊರ್ವರು 6.ಗಂಟೆಗೆ ಬಂದಾಗ ಮುಂಬಾಗಿಲು ಚಿಲಕ ಮುರಿದಿದ್ದು ಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ದೇವಸ್ಥಾನದ ಸೇವಾ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ ತುಂಬೆಯವರಿಗೆ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿದ್ದು ತನಿಖೆ ನಡೆಯುತ್ತಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…