ಜನ ಮನದ ನಾಡಿ ಮಿಡಿತ

Advertisement

ಪೊಲೀಸರಿಗೆ ಮರಳುಗಾರಿಕೆ ಮಾಹಿತಿ ನೀಡಿದ ಸೋಮೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯನ ಕೊಲೆಯತ್ನ..!!: ಮುಂದುವರಿದ ಅಕ್ರಮ ಮರಳುಗಾರಿಕೆ

ಉಳ್ಳಾಲ: ಅಕ್ರಮ ಮರಳುಗಾರಿಕೆ ವಿರುದ್ಧ ಪೊಲೀಸರಿಗೆ ದೂರು ನೀಡಿದ ಕಾರಣಕ್ಕೆ, ಮರಳು ದಂಧೆಯ ಆರೋಪಿ ಸೋಮೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರೊಬ್ಬರಿಗೆ ರಾಡ್‌ ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಸೋಮೇಶ್ವರ ಪುರಸಭೆ ಕಚೇರಿ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಪ್ರತಿಭಟನೆ ನಂತರ ಕೆಲ ದಿನಗಳ ಕಾಲ ಮರಳುಗಾರಿಕೆ ಸ್ಥಗಿತಗೊಂಡಿದ್ದರೂ, ಇದೀಗ ತಡರಾತ್ರಿ ಉಳ್ಳಾಲ ತಾಲೂಕಿನ ಎಲ್ಲಾ ರಸ್ತೆಗಳಲ್ಲಿಯೂ ಮರಳುಗಾರಿಕೆಯ ಲಾರಿಗಳು ಸಂಚರಿಸಲು ಆರಂಭವಾಗಿದೆ.

ಸೋಮೇಶ್ವರ ಉಚ್ಚಿಲದ,ಫಿಶರೀಶ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕಿಶೋರ್ ಎಮ್ ಉಚ್ಚಿಲ(೫೩)ಹಲ್ಲೆಗೊಳಗಾದ ವ್ಯಕ್ತಿ. ಉಚ್ಚಿಲ ಬಟ್ಟಪ್ಪಾಡಿ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಸುನಿಲ್ ಪೂಜಾರಿ ಹಲ್ಲೆಗೈದಿರುವುದಾಗಿ ಆರೋಪಿಸಲಾಗಿದೆ.ಕಿಶೋರ್ ಅವರು ಸೋಮವಾರ ಬೆಳಿಗ್ಗೆ ತನ್ನ ಮಿತ್ರ ಪುಷ್ಪರಾಜ್ ಎಂಬವರ ಜತೆಯಲ್ಲಿ ಸೋಮೇಶ್ವರದ ಹೊಟೇಲಲ್ಲಿ ಚಹಾ ಕುಡಿದು ಸ್ಕೂಟರಲ್ಲಿ ಸಹ ಸವಾರನಾಗಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಸೋಮೇಶ್ವರ ಪುರಸಭಾ ಕಚೇರಿ ಸಮೀಪದಲ್ಲಿ ಆರೋಪಿ ಸುನಿಲ್ ಪೂಜಾರಿ ತಡೆದಿದ್ದಾನೆ. ಆರೋಪಿ ಸುನಿಲ್ ಕಿಶೋರ್ ಅವರಲ್ಲಿ ಮರಳುಗಾರಿಕೆಯ ಬಗ್ಗೆ ಭಾರೀ ಪೊಲೀಸರಿಗೆ ಮಾಹಿತಿ ನೀಡುತ್ತೀಯ, ನಿಮ್ಮಂತಹವರು ಜೀವವಿದ್ದರೆ ನಮ್ಮಂತವರಿಗೆ ಉಳಿಗಾಲವಿಲ್ಲ. ಇನ್ನು ಮೂರು ತಿಂಗಳೊಗೆ ನೀನೊಬ್ಬನೆ ಸಿಕ್ಕಿದರೆ ಕೊಂದು ಬಿಡುತ್ತೇನೆಂದು ಭುಜ ಮತ್ತು ಸೊಂಟಕ್ಕೆ ಹಲ್ಲೆ ನಡೆಸಿದ್ದು,ಬಳಿಕ ಸೊಂಟದಿಂದ ಚಾಕು ಹೊರ ತೆಗೆದು ಇರಿಯಲು ಮುಂದಾಗಿದ್ದಾನೆ .ಈ ವೇಳೆ ಸ್ನೇಹಿತ ಪುಷ್ಪರಾಜ್ ಅವರು ಸ್ಕೂಟರನ್ನು ವೇಗವಾಗಿ ಚಲಾಯಿಸಿದರ ಪರಿಣಾಮ ನಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆಂದು ಹಲ್ಲೆಗೊಳಗಾದ ಕಿಶೋರ್ ಆರೋಪಿಸಿದ್ದಾರೆ.

ಉಚ್ಚಿಲ ಬಟ್ಟಂಪಾಡಿ ಪ್ರದೇಶದಲ್ಲಿ ತಿಂಗಳುಗಳ ಹಿಂದಷ್ಟೆ ಸಿಸಿಬಿ ಪೊಲೀಸರು ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮರಳು ವಶಪಡಿಸಿದ್ದರು. ಆ ಪ್ರಕರಣದಲ್ಲಿ ಮರಳುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಸುನಿಲ್ ಪೂಜಾರಿ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಹಲ್ಲೆಗೊಳಗಾದ ಕಿಶೋರ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಉಳ್ಳಾಲ ಠಾಣೆಯಲ್ಲಿ ಆರೋಪಿ ಸುನಿಲ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ. ಸುನಿಲ್‌ ವಿರುದ್ಧ ಈಗಾಗಲೇ ಎರಡು ಪ್ರಕರಣಗಳು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿದ್ದು, ಇದೀಗ ಮೂರನೇ ಪ್ರಕರಣ ದಾಖಲಾಗಿದೆ. ಕೆಲ ದಿನಗಳ ಹಿಂದಷ್ಠೇ ಕೆಥೋಲಿಕ್‌ ಮಹಾಸಭಾ ಮುಖಂಡ, ಆಲ್ವಿನ್‌ ಡಿಸೋಜ ವಿರುದ್ಧ ಅಡ್ಯಾರು ಸಮೀಪ ಮರಳು ಮಾಫಿಯಾ ದವರಿಂದ ಹಲ್ಲೆ ನಡೆದಿತ್ತು. ಪ್ರತಿಭಟನೆ ಹಲ್ಲೆ ಬಳಿಕ ಕೆಲ ದಿನಗಳ ಕಾಲ ಮರಳುಗಾರಿಕೆ ಸ್ಥಗಿತಗೊಂಡಿತ್ತಾದರೂ, ಇದೀಗ ತಡರಾತ್ರಿ ೧೧ ರ ನಂತರ ಉಳ್ಳಾಲ ತಾಲೂಕಿನ ಎಲ್ಲಾ ರಸ್ತೆಗಳಲ್ಲಿಯೂ ಮರಳು ಹೊತ್ತ ಟಿಪ್ಪರ್‌ ಲಾರಿಗಳ ಅಟ್ಟಹಾಸ ಮುಂದುವರಿದಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!