ಎಡನೀರು ಮಠದ ಸ್ವಾಮೀಜಿಗಳು ನಮಗೆಲ್ಲ ಮಾರ್ಗದರ್ಶಕರು ನಮ್ಮ ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಿಗೆ ಅವರ ಮಾರ್ಗದರ್ಶನದ ಮೂಲಕವೇ ನಾವು ಮುನ್ನಡೆಯುತ್ತಿದ್ದೇವೆ.
ಕೆಮ್ಮಾಯಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಸ್ವಾಮೀಜಿಯವರು ಚಾತುರ್ಮಾಸ ವೃತವನ್ನು ಕೂಡ ನಡೆಸಿದ್ದಾರೆ. ಮಹಾ ವಿಷ್ಣು ದೇವಸ್ಥಾನದ ಭಕ್ತರಾಗಿರುವ ನಮಗೆಲ್ಲ ಮಾರ್ಗದರ್ಶರಾಗಿರುವಂತ ಶ್ರೀಗಳ ಈ ಒಂದು ಹಿಂದೂ ಧರ್ಮದ ಕಾರ್ಯಗಳಿಗೆ ಕಿಡಿಗೇಡಿಗಳು ಅಡ್ಡಿಯನ್ನು ಉಂಟುಮಾಡುವಂತದ್ದು ಅತ್ಯಂತ ಖಂಡನೀಯವಾಗಿದೆ ಕೇರಳದ ಗಡಿ ಭಾಗದಲ್ಲಿರುವಂತ ಎಡನೀರು ಮಠ ಅತ್ಯಂತ ಪವಿತ್ರವಾದ ಮತ್ತು ಪ್ರಾಚೀನ ಪರಂಪರೆ ಹೊಂದಿರುವ ಮಠ, ಈ ಮಠದ ಸ್ವಾಮೀಜಿಗಳಿಗೆ ರಕ್ಷಣೆ ಕೊಡುವಲ್ಲಿ ಕೇರಳ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವರ ಭಕ್ತರು ಇಲ್ಲಿಯ ಸ್ಥಳೀಯ ಎಲ್ಲಾ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ಉಗ್ರವಾಗಿ ಹೋರಾಟ ಮಾಡುತ್ತೇವೆ. ಈ ಘಟನೆ ಹಿಂದುಗಳ ಧಾರ್ಮಿಕ ಭಾವನೆಗೆ ನಂಬಿಕೆಗೆ ಧಕ್ಕೆಯನ್ನುಂಟು ಮಾಡಿದೆ ನಮಗೆಲ್ಲ ಅಪಾರ ನೋವಾಗಿದೆ ನಾವೆಲ್ಲ ಶ್ರೀಗಳ ಪರವಾಗಿ ಶ್ರೀಮಠದ ಪರವಾಗಿ ಈ ಕೃತ್ಯವನ್ನು ಗಟ್ಟಿ ಧ್ವನಿಯಲ್ಲಿ ಖಂಡಿಸುತ್ತಿದ್ದೇವೆ ಎಚ್ಚರಿಕೆಯನ್ನು ಕೂಡ ನೀಡುತ್ತಿದ್ದೇವೆ. ನಾಗೇಶ್ ಟಿ ಎಸ್ ಕೆಮ್ಮಾಯಿ ಭಕ್ತ ವೃಂದ ಮಹಾವಿಷ್ಣುಮೂರ್ತಿ ದೇವಸ್ಥಾನ ಕೆಮ್ಮಾಯಿ
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…