ಬೆಳಗಾವಿ: ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ನೇಣಿಗೆ ಶರಣಾದ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಮೂಲತಃ ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಪುರ (26) ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ರವರು ಪೊಲೀಸ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ.



