ಮಂಗಳೂರು: 2024 ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನವಂಬರ್ 16 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.
ಉದ್ಯಮ ಕ್ಷೇತ್ರದ ಅದ್ವಿತೀಯ ಸಾಧಕರಾಗಿ ಸಾವಿರಾರು ಜನರ ಬದುಕಿಗೆ ಬೆಳಕಾದ ಅಭಿವೃದ್ದಿಯ ರೂವಾರಿ , ದೈವ, ದೇವಸ್ಥಾನಗಳ ಅಭಿವೃದ್ಧಿಯ ಪ್ರೇರಕ ಶಕ್ತಿಯಾಗಿ ಕರಾವಳಿಯ ನೂರಾರು ಸಂಘ ಸಂಸ್ಥೆಗಳಿಗೆ ನೆರವಿನ ಶಕ್ತಿ ನೀಡಿದ ಮಹಾದಾನಿಗಳಾದ ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿ ಒಲಿದು ಬಂದಿದ್ದು,
ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನ ಸಮಾರಂಭ ಜರಗಲಿದೆ ಎಂದು ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಶ್ರೀ ಪಟ್ಲ ಸತೀಶ್ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಸಮಾರಂಭದಲ್ಲಿ ಇತರ ಸಂಘ ಸಂಸ್ಥೆಗಳಿಗೂವ ಗೌರವಾರ್ಪಣೆ ಮಾಡುವ ಅವಕಾಶ ಇದೆ. ಹೆಸರನ್ನು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ,ಅಡ್ಯಾರ್ (9845172865) ಅಥವಾ ಜೊತೆಕಾರ್ಯದರ್ಶಿ ಶ್ರೀ ರವಿಚಂದ್ರ ಶೆಟ್ಟಿ ಅಶೋಕನಗರ (9448623375) ಅವರಲ್ಲಿ ನೋಂದಾಯಿಸ ಬಹುದು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…