ಕುಕ್ಕೆ ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಒಳಪಟ್ಟ ಸ್ಥಳೀಯ ಅಭಯ ಆಂಜನೇಯ ಗುಡಿ ದೇವಸ್ಥಾನದಲ್ಲಿ ಕಳವಾಗಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾದ 24 ಗಂಟೆಯೊಳಗೆ ಕಳ್ಳನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಧಾರವಾಡ ಮೂಲದ ವೀರಣ್ಣ ಗೌಡ (26ವ) ಕಳ್ಳತನ ಪ್ರಕರಣದಲ್ಲಿ ಬಂಧಿತನಾದ ಆರೋಪಿ.ದೇಗುಲದ ಪಾರ್ಕಿಂಗ್ ಜಾಗದಲ್ಲಿ ಸುತ್ತಾಡುತ್ತಿದ್ದ ಈತನನ್ನು ಎಸ್.ಐ ಕಾರ್ತಿಕ್.ಕೆ ನೇತೃತ್ವದ ಪೊಲೀಸರ ತಂಡ ಪತ್ತೆ ಹಚ್ಚಿದ್ದಾರೆ. ಜಾಗವೊಂದರ ಬಳಿ ಮೂಟೆ ಕಟ್ಟಿರುವುದು ಕಂಡು ಬಂದಿದ್ದು . ಸುಮಾರು 15 ಸಾವಿರಕ್ಕೂ ಹೆಚ್ಚು ಮೊತ್ತದ ಬೆಲೆಬಾಳುವ ಗಂಟೆ, ಕಾಲುದೀಪ, ತಟ್ಟೆ,ತೂಗುದೀಪ , ಸಿಸಿ ಕೆಮರಾ ಸ್ವಿಚ್ ಸೇರಿದಂತೆ ಕಳ್ಳತನ ಮಾಡಿದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಅವರ ಮಾರ್ಗದರ್ಶನದಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ನೇತೃತ್ವದ ಕಾಸ್ಟೇಬಲ್ ಗಳಾದ ಮಹೇಶ್ ಎಂ ಕೆ, ಆಕಾಶ್, ನವೀನ್, ಸಂಧ್ಯಾ, ಮಹೇಶ್ ,ಸತೀಶ್ ಪರಮೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.ಗುಡಿಯ ಅರ್ಚಕರು ನ. 3ರಂದು ರಾತ್ರಿ ಬಾಗಿಲು ಹಾಕಿ ತೆರಳಿದ್ದು, ನ. 4ರಂದು ಬೆಳಗ್ಗೆ ಬಂದು ನೋಡಿದಾಗ ಕಳ್ಳರು ನುಗ್ಗಿ ದೇವಸ್ಥಾನದಲ್ಲಿದ್ದ ಪೂಜೆ ಸಾಮಗ್ರಿಗಳು,ಸಿಸಿ ಕೆಮರಾದ ಸೊತ್ತುಗಳು ಕಳ್ಳತನ ಆಗಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಸುಬ್ರಹ್ಮಣ್ಯ ಠಾಣೆಗೆ ನೀಡಿದ್ದರು
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…