ಜನ ಮನದ ನಾಡಿ ಮಿಡಿತ

Advertisement

ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡಿನಲ್ಲಿ ದಸ್ತಗಿರಿ ಮಾಡುವಲ್ಲಿ ಬಂಟ್ವಾಳ ಗ್ರಾ. ಪೊಲೀಸರು ಯಶಸ್ವಿ

ಬಂಟ್ವಾಳ: ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡಿನಲ್ಲಿ ದಸ್ತಗಿರಿ ಮಾಡುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.


ಪುತ್ತೂರು ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್‌ ಶರೀಫ್(44) ಬಂಧಿತ ಆರೋಪಿಯಾಗಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯ ನ್ಯಾಯಂಗ ಬಂಧನ ವಿಧಿಸಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಗೆ ಸಂಬಂಧಿಸಿ 2004ರ ನವೆಂಬರ್ ೭ರಂದು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಕಳ್ಳತನ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡ್ಡಿದ್ದನು.ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಹಲವಾರು ವಿಳಾಸ, ಬದಲಾವಣೆ ಮಾಡಿಕೊಂಡು ಬಂಧನಕ್ಕೆ ಸಿಗದೇ ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಪುತ್ತಿಗೆ ಎಂಬಲ್ಲಿ ವಾಸವಾಗಿದ್ದನು.ಮೊಹಮ್ಮದ್ ಶರೀಫ್ ಇತ್ತೀಚಿಗೆ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ದಸ್ತಗಿರಿ ಆಗಿ ಇತ್ತೀಚಿಗೆ ಜಾಮೀನಿನ ಮೇಲೆ ಬಿಡುಗಡೆ ಆಗಿರುತ್ತಾನೆ.
ಈ ಕಾರ್ಯಚರಣೆಯನ್ನು ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ವಿಜಯಪ್ರಸಾದ್ ರವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ನಿರೀಕ್ಷಕ ಶಿವಕುಮಾರ್ ಅವರ ನೇತೃತ್ವದಲ್ಲಿ ಪಿಎಸ್ಐ ಗಳಾದ ಹರೀಶ್ ಎಂ ಆರ್ ಮತ್ತು ಮೂರ್ತಿ ಹಾಗೂ ಸಿಬ್ಬಂದಿಯವರಾದ ಹರಿಶ್ಚಂದ್ರ ಮತ್ತು ಗಣೇಶ ಅವರು ಕಾರ್ಯಚರಣೆ ನಡೆಸಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!