ಬಂಟ್ವಾಳ: ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡಿನಲ್ಲಿ ದಸ್ತಗಿರಿ ಮಾಡುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಪುತ್ತೂರು ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್ ಶರೀಫ್(44) ಬಂಧಿತ ಆರೋಪಿಯಾಗಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯ ನ್ಯಾಯಂಗ ಬಂಧನ ವಿಧಿಸಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಗೆ ಸಂಬಂಧಿಸಿ 2004ರ ನವೆಂಬರ್ ೭ರಂದು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಕಳ್ಳತನ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡ್ಡಿದ್ದನು.ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಹಲವಾರು ವಿಳಾಸ, ಬದಲಾವಣೆ ಮಾಡಿಕೊಂಡು ಬಂಧನಕ್ಕೆ ಸಿಗದೇ ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಪುತ್ತಿಗೆ ಎಂಬಲ್ಲಿ ವಾಸವಾಗಿದ್ದನು.ಮೊಹಮ್ಮದ್ ಶರೀಫ್ ಇತ್ತೀಚಿಗೆ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ದಸ್ತಗಿರಿ ಆಗಿ ಇತ್ತೀಚಿಗೆ ಜಾಮೀನಿನ ಮೇಲೆ ಬಿಡುಗಡೆ ಆಗಿರುತ್ತಾನೆ.
ಈ ಕಾರ್ಯಚರಣೆಯನ್ನು ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ವಿಜಯಪ್ರಸಾದ್ ರವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ನಿರೀಕ್ಷಕ ಶಿವಕುಮಾರ್ ಅವರ ನೇತೃತ್ವದಲ್ಲಿ ಪಿಎಸ್ಐ ಗಳಾದ ಹರೀಶ್ ಎಂ ಆರ್ ಮತ್ತು ಮೂರ್ತಿ ಹಾಗೂ ಸಿಬ್ಬಂದಿಯವರಾದ ಹರಿಶ್ಚಂದ್ರ ಮತ್ತು ಗಣೇಶ ಅವರು ಕಾರ್ಯಚರಣೆ ನಡೆಸಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…