ಜನ ಮನದ ನಾಡಿ ಮಿಡಿತ

Advertisement

ಮಣಿಪಾಲ: ಅಂಗಡಿಯ ಶೆಟರ್ ಒಡೆದು ಕಳ್ಳತನ; ಮೂವರು ಆರೋಪಿಗಳ ಬಂಧನ

ಉಡುಪಿ: ಶಿವಳ್ಳಿ ಗ್ರಾಮದ ಬೇಕ್‌ ಲೇನ್‌ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್‌ ಸ್ಟೋರ್ಸ್‌ ನ ಶೆಟರ್‌ ಒಡೆದು ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಕೊಪ್ಪಳ ಜಿಲ್ಲೆಯ ಗಜೇಂದ್ರಗಡದ ನಿವಾಸಿ ಮಂಜುನಾಥ್‌ ಚಿದಾನಂದಪ್ಪ ನರತೆಲಿ(24) ಉಡುಪಿ ಜಿಲ್ಲೆಯ ಹಟ್ಟಿಯಂಗಡಿಯ ನಿವಾಸಿಗಳಾದ ಪ್ರಸಾದ್‌(22) ಕಿಶನ್‌(20) ಬಂಧಿತ ಆರೋಪಿಗಳು. ಈ ಮೂವರು ಆರೋಪಿಗಳು ಅ.31ರಂದು ರಾತ್ರಿ ಬೇಕ್‌ ಲೇನ್‌ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್‌ ಸ್ಟೋರ್ಸ್‌ ನ ಶೆಟರ್‌ ಒಡೆದು 60 ಸಾವಿರ ರೂ. ನಗದು ಕಳ್ಳತನ ಮಾಡಿ ಪರಾರಿಯಾಗಿದ್ದರು. ಕಾರ್ಯಾಚರಣೆಗೆ ಇಳಿದ ಪೊಲೀಸರು ಮಣಿಪಾಲದ ಶಿಂಬ್ರಾ ಬ್ರಿಡ್ಜ್‌ ಬಳಿ ಬುಧವಾರ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಸುಮಾರು 5,00,000/- ರೂ ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!